ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಫೆಡರೇಷನ್‌ ಅಧ್ಯಕ್ಷ: ಕಣ್ಣೀರಿಟ್ಟ ಸಾಕ್ಷಿ ಮಲೀಕ್‌

ಸುಪ್ರೀಂ ಕೋರ್ಟ್‌ ಆದೇಶದಂತೆ ಭಾರತೀಯ ಕುಸ್ತಿ ಫೆಡರೇಷನ್‌ಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್‌ ಅವರ ಆಪ್ತ ಸಂಜಯ್‌ ಸಿಂಗ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
06:04 PM Dec 21, 2023 IST | Ashitha S

ನವದೆಹಲಿ: ಸುಪ್ರೀಂ ಕೋರ್ಟ್‌ ಆದೇಶದಂತೆ ಭಾರತೀಯ ಕುಸ್ತಿ ಫೆಡರೇಷನ್‌ಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್‌ ಅವರ ಆಪ್ತ ಸಂಜಯ್‌ ಸಿಂಗ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Advertisement

ಇದರ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟೇ ಮಾತನಾಡಿದ ಸಾಕ್ಷಿ ಮಲೀಕ್‌ ತಾವು ರೆಸ್ಲಿಂಗ್‌ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನು ಸಾಕ್ಷಿ ಮಲೀಕ್‌ ಅವರು ರೆಸ್ಲಿಂಗ್‌ ಅನ್ನು ತೊರೆಯುವುದಾಗಿ ಘೋಷಣೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಿಜ್‌ ಭೂಷಣ್‌ ಸಿಂಗ್‌, ಅದಕ್ಕೆ ತಾವೇನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಚುನಾವಣೆ ಮುಗಿದ ನಂತರ, ಸಾಕ್ಷಿ ಮಲಿಕ್ ದೊಡ್ಡ ಘೋಷಣೆ ಮಾಡಿದ್ದಾರೆ.

ತಾನು ಕುಸ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಕಣ್ಣೀರಿಡುತ್ತಲೇ ಹೇಳಿದರು. ಅದೇ ಸಮಯದಲ್ಲಿ, ಯುವ ಕ್ರೀಡಾಪಟುಗಳಿಗೆ ಅನ್ಯಾಯವನ್ನು ಎದುರಿಸಲು ಸಿದ್ಧರಾಗಿರಿ. ಕುಸ್ತಿಯ ಭವಿಷ್ಯ ಅಂಧಕಾರದಲ್ಲಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಹೇಳಿದರು.

Advertisement

ನಾವು 40 ದಿನಗಳ ಕಾಲ ಬೀದಿಯಲ್ಲಿ ಮಲಗಿದ್ದೆವು ಮತ್ತು ದೇಶದ ಅನೇಕ ಭಾಗಗಳಿಂದ ನಮಗೆ ಬೆಂಬಲ ವ್ಯಕ್ತವಾಗಿತ್ತು ಎಂದು ಸಾಕ್ಷಿ ಮಲೀಕ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವೃದ್ಧರು, ಬಡವರು, ಅನಾಥರು ಎಲ್ಲರೂ ನಮ್ಮ ಬೆಂಬಲಕ್ಕೆ ಬಂದಿದ್ದರು. ಆದರೆ, ಚುನಾವಣೆಯಲ್ಲಿ ನಾವು ಗೆಲ್ಲಲಿಲ್ಲ, ಆದರೆ ಎಲ್ಲರಿಗೂ ಧನ್ಯವಾದಗಳು. ನಾವು ನಮ್ಮ ಹೃದಯದಿಂದ ಹೋರಾಡಿದ್ದೇವೆ, ಆದರೆ ಡಬ್ಲ್ಯುಎಫ್‌ಐ ಮಾಜಿ ಅಧ್ಯಜ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವ್ಯಾಪಾರ ಪಾಲುದಾರ ಮತ್ತು ಆಪ್ತ ಸಂಜಯ್ ಸಿಂಗ್ ಆಯ್ಕೆಯಾದರೆ, ನಾನು ನನ್ನ ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ಈಗ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳುವ ಹೊತ್ತಿಗೆ ರೆಸ್ಲಿಂಗ್‌ಗೆ ನಿವೃತ್ತಿ ನೀಡುತ್ತಿದ್ದೇನೆ ಎನ್ನುವ ಮಾತು ಹೇಳಿ ತಮ್ಮ ಬೂಟುಗಳನ್ನು ಮೇಜಿನ ಮೇಲೆ ಇಟ್ಟರು.

Advertisement
Tags :
GOVERNMENTindiaKARNATAKALatestNewsNewsKannadaಚುನಾವಣೆನವದೆಹಲಿಸಾಕ್ಷಿ ಮಲೀಕ್‌
Advertisement
Next Article