ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಡಿಕೆಗೆ ಬೆಂಬಲ ಬೆಲೆ ಘೋಷಿಸುವಂತೆ ಸರಕಾರಕ್ಕೆ ಸಂಜೀವ ಮಠಂದೂರು ಮನವಿ

ಇದೀಗ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕುಸಿದಿದ್ದು ಅಡಿಕೆ ಬೆಳೆಗಾರರಿಗೆ ಸಂಕಷ್ಟತಂದೊಡ್ಡಿದೆ. ಈ ಕುರಿತು ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ, ಮಾಜಿ ಶಾಸಕ ಸಂಜೀವ ಮಠಂದೂರು ಅಡಿಕೆಗೆ ಬೆಂಬಲ ಬೆಲೆ ಘೋಷಿಸುವಂತೆ ಸರಕಾರಕ್ಕೆ ಮನವಿಸಲ್ಲಿಸಿ ಮಾತನಾಡಿದ ಅವರು,'500 ಗಡಿ ದಾಟಿದ್ದ ಅಡಿಕೆ ಬೆಲೆ ಇದೀಗ 340 ಕ್ಕೆ ಕುಸಿದಿದೆ,ಅಡಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡ ಕೃಷಿಕನ ಮೇಲೆ ಇದು ದೊಡ್ಡ ಪರಿಣಾಮವನ್ನೇ ಬೀರಿದೆ ಎಂದರು.
05:43 PM Feb 22, 2024 IST | Gayathri SG

ಪುತ್ತೂರು: ಇದೀಗ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕುಸಿದಿದ್ದು ಅಡಿಕೆ ಬೆಳೆಗಾರರಿಗೆ ಸಂಕಷ್ಟತಂದೊಡ್ಡಿದೆ. ಈ ಕುರಿತು ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟಾದ ಸಂಚಾಲಕ, ಮಾಜಿ ಶಾಸಕ ಸಂಜೀವ ಮಠಂದೂರು ಅಡಿಕೆಗೆ ಬೆಂಬಲ ಬೆಲೆ ಘೋಷಿಸುವಂತೆ ಸರಕಾರಕ್ಕೆ ಮನವಿಸಲ್ಲಿಸಿ ಮಾತನಾಡಿದ ಅವರು,"500 ಗಡಿ ದಾಟಿದ್ದ ಅಡಿಕೆ ಬೆಲೆ ಇದೀಗ 340 ಕ್ಕೆ ಕುಸಿದಿದೆ,ಅಡಿಕೆಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡ ಕೃಷಿಕನ ಮೇಲೆ ಇದು ದೊಡ್ಡ ಪರಿಣಾಮವನ್ನೇ ಬೀರಿದೆ ಎಂದರು.

Advertisement

"ದಕ್ಷಿಣಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಗೂ ಮಿಕ್ಕಿದ ಪ್ರದೇಶದಲ್ಲಿ ಅಡಿಕೆಯನ್ನು ಬೆಳೆಯಲಾಗುತ್ತಿದ್ದು,ವಾಣಿಜ್ಯ ಬೆಳೆಯಾಗಿ ಅಡಿಕೆ ಗುರುತಿಸಿಕೊಂಡಿದೆ, ಹೀಗಿರುವಾಗ ಅಡಿಕೆ ಬೆಲೆ ಕುಸಿತ ಇಡೀ ಜಿಲ್ಲೆಯ ಆರ್ಥಿಕ ವ್ಯವಸ್ಥೆಯ ಮೇಲೆಯೂ ಪರಿಣಾಮ ಬೀರಲಿದೆ. ಇದರಿಂದ ತಕ್ಷಣವೇ ಸರಕಾರ ಮಧ್ಯಪ್ರವೇಶಿಸಬೇಕು ಹಾಗೂ ರಾಜ್ಯ ಸರಕಾರ ಕೃಷಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು ಎಂದ ಅವರು ಸಾಲದ ಪ್ರಮಾಣದಲ್ಲಿ ಏರಿಕೆ ಮಾಡುವ ಭರವಸೆ ನೀಡಲಾಗಿತ್ತು ಆದರೆ ಈವರೆಗೂ ಅದನ್ನು ಮಾಡಿಲ್ಲ ಜೊತೆಗೆ ಹಾಲಿನ ಪ್ರೋತ್ಸಾಹ ಧನ ಕೂಡ ಬರದೆ ಏಳೆಂಟು ತಿಂಗಳೇ ಕಳೆದಿದೆ ಸರಕಾರ ಈ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Advertisement
Advertisement
Tags :
LatestNewsNewsKannadaಪುತ್ತೂರುಸಂಜೀವಮಠಂದೂರು
Advertisement
Next Article