ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಟಿಟಿ ಅಂಗಳಕ್ಕೆ ಕಾಲಿಟ್ಟ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’

ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’  ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್​ ಪ್ರೈಂ ವಿಡಿಯೋ’  ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ.
03:53 PM Jan 26, 2024 IST | Ashika S

ಬೆಂಗಳೂರು: ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’  ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್​ ಪ್ರೈಂ ವಿಡಿಯೋ’  ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ.

Advertisement

ಥಿಯೇಟರ್​ನಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು. 2023ರ ನವೆಂಬರ್ 17ರಂದು ತೆರೆಕಂಡಿದ್ದ ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದರು. ಈಗ ಆ ಕಾಯುವಿಕೆ ಕೊನೆಗೊಂಡಿದೆ.

ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾ ಸ್ಟ್ರೀಮಿಂಗ್​ ಆಗುತ್ತಿದೆ.

Advertisement

ರಕ್ಷಿತ್​ ಶೆಟ್ಟಿ  ಜೊತೆ ರುಕ್ಮಿಣಿ ವಸಂತ್​ ಮತ್ತು ಚೈತ್ರಾ ಆಚಾರ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಹೇಮಂತ್​ ಎಂ. ರಾವ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನ, ಅದ್ವೈತ್​ ಗುರುಮೂರ್ತಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಈ ಬಗ್ಗೆ ಹೆಚ್ಚೇನೂ ಪ್ರಚಾರ ನೀಡಿಲ್ಲ. ಬಹುನಿರೀಕ್ಷಿತ ಸಿನಿಮಾದ ಒಟಿಟಿ ರಿಲೀಸ್​ ವೇಳೆ ಚಿತ್ರತಂಡದವರು ಒಂದಷ್ಟು ಪ್ರಚಾರ ಮಾಡುವುದು ವಾಡಿಕೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಚಿತ್ರದ ಒಟಿಟಿ ರಿಲೀಸ್​ ಕುರಿತು ಅಷ್ಟೇನೂ ಪ್ರಚಾರ ಮಾಡಲಾಗಿಲ್ಲ.

Advertisement
Tags :
‘ಅಮೇಜಾನ್​ ಪ್ರೈಂLatetsNewsNewsKannadaಒಟಿಟಿರಕ್ಷಿತ್ ಶೆಟ್ಟಿಸಪ್ತ ಸಾಗರದಾಚೆ ಎಲ್ಲೋಸಿನಿಮಾ
Advertisement
Next Article