For the best experience, open
https://m.newskannada.com
on your mobile browser.
Advertisement

ಬಿಡುಗಡೆಗೆ ತಯಾರಾಗಿದೆ ವಿಶಿಷ್ಟ ಕಥಾ ಹಂದರ ಹೊಂದಿರುವ `ಸಾರಾಂಶ'’

ಕನ್ನಡ ಚಿತ್ರರಂಗವೀಗ ಹೊಸಾ ಹೊಸಾ ಸಿನೆಮಾಗಳಿಗೆ ಅವಕಾಶ ನೀಡುತ್ತಿದ್ದು ಅಂತಹದ್ದೇ  ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ.
08:48 PM Jan 13, 2024 IST | Ashika S
ಬಿಡುಗಡೆಗೆ ತಯಾರಾಗಿದೆ ವಿಶಿಷ್ಟ ಕಥಾ ಹಂದರ ಹೊಂದಿರುವ  ಸಾರಾಂಶ ’

ಬೆಂಗಳೂರು: ಕನ್ನಡ ಚಿತ್ರರಂಗವೀಗ ಹೊಸಾ ಹೊಸಾ ಸಿನೆಮಾಗಳಿಗೆ ಅವಕಾಶ ನೀಡುತ್ತಿದ್ದು ಅಂತಹದ್ದೇ  ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ.

Advertisement

`ಸಾರಾಂಶ’  ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ,  ಶ್ರುತಿ ಹರಿಹರನ್ ಇಲ್ಲಿ ಪ್ರಧಾನ ಪಾತ್ರವೊಂದನ್ನು ನಿರ್ವಹಿಸಿದ್ದಾರೆ.

ಸೂರ್ಯ ವಸಿಷ್ಠ ಮತ್ತು ಗಂಟುಮೂಟೆ ಖ್ಯಾತಿಯ ರೂಪಾ ರಾವ್ ಸಂಭಾಷಣೆ ಬರೆದಿದ್ದಾರೆ. ಆ ದಿನಗಳು, ತಮಸ್ಸು, ಮಠ ಮುಂತಾದ ಸಿನಿಮಾಗಳ ಮೂಲಕ ಖ್ಯಾತರಾಗಿರೋ ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

Advertisement

ಓರ್ವ ಕಥೆಗಾರ ತಾನು ಸೃಷ್ಟಿಸಿದ ಪಾತ್ರವನ್ನೇ ಎದುರುಗೊಳ್ಳುವ ರೋಮಾಂಚಕ ಕಥಾ ಎಳೆ, ಆ ಪಾತ್ರವನ್ನು ಕಥೆಗಾರ ಬರೆದನೋ, ಆ ಪಾತ್ರವೇ ಕಥೆಗಾರನ ಮೂಲಕ ಬರೆಸಿಕೊಳ್ಳುತ್ತಿದೆಯೋ ಎಂಬಂಥಾ ಸೂಕ್ಷ್ಮ ಕದಲಿಕೆಯ ಸುತ್ತ ಈ ಸಿನಿಮಾ ಚಲಿಸುತ್ತದೆ.

Advertisement
Tags :
Advertisement