For the best experience, open
https://m.newskannada.com
on your mobile browser.
Advertisement

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.
06:06 PM May 19, 2024 IST | Nisarga K
ಥಾಯ್ಲೆಂಡ್ ಓಪನ್ 2024  ಸಾತ್ವಿಕ್ ಚಿರಾಗ್ ಜೋಡಿಗೆ ಭರ್ಜರಿ ಗೆಲುವು
ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಬ್ಯಾಂಕಾಕ್‌: ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

Advertisement

ಏಕಪಕ್ಷೀಯವಾಗಿ ಸಾಗಿದ ಫೈನಲ್​ ಪಂದ್ಯದಲ್ಲಿ ಏಷ್ಯಾಡ್‌ ಚಾಂಪಿಯನ್‌ ಹಾಗೂ ಕೂಟದ ಅಗ್ರ ಶ್ರೇಯಾಂಕಿ ಭಾರತೀಯ ಜೋಡಿ ಚೀನದ ಚೆನ್‌ ಬೊ ಯಾಂಗ್‌-ಲಿಯು ಯಿ ವಿರುದ್ಧ 21-15, 21-15 ನೇರ ಗೇಮ್​ಗಳಿಂದ ಹಿಮ್ಮೆಟಿಸಿದರು. ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಚಿರಾಗ್‌- ಸಾತ್ವಿಕ್‌ ಜೋಡಿ ಚೈನೀಸ್‌ ತೈಪೆಯ ಲು ಮಿಂಗ್‌ ಚೆ-ಟಾಂಗ್‌ ಕೈ ವೀ ವಿರುದ್ಧವೂ 21-11, 21-12 ಅಂತರದ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರಿ ಪ್ರಶಸ್ತಿಗೆ ಮುತ್ತಿಕ್ಕಿದರು

Advertisement

Advertisement
Tags :
Advertisement