ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇವಿಎಂ-ವಿವಿಪ್ಯಾಟ್‌ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.
02:03 PM Apr 26, 2024 IST | Ashitha S

ವದೆಹಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

Advertisement

ನಮಗೆ ಇವಿಎಂನಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ. ಶೇ.100ರಷ್ಟು ವಿವಿಪ್ಯಾಟ್‌ಗಳನ್ನು ಹೊಂದಾಣಿಕೆ ಮಾಡಲು ಸಾಧ್ಯವಿಲ್ಲ. ಪುನಃ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ.

ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸೌ ಹಾಗೂ ಇತರೆ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಒಂದೇ ರೀತಿಯ ತೀರ್ಪು ನೀಡಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತು.

Advertisement

ಮತಪತ್ರಗಳನ್ನು(ಬ್ಯಾಲೆಟ್‌ ಪೇಪರ್‌) ತರುವುದಕ್ಕೆ ಸಂಬಂಧಿಸಿದ ಎಲ್ಲಾ ರಾಜ್ಯಗಳನ್ನು ನಾವು ವಜಾಗೊಳಿಸುತ್ತಿದ್ದೇವೆ. ನಮ್ಮ ಮನಸ್ಸಿನಲ್ಲಿದ್ದ ಅನುಮಾನಗಳನ್ನು ಆಯೋಗ ಬಗೆಹರಿಸಿದೆ. ಎಲ್ಲವನ್ನೂ ಅನುಮಾನದಿಂದ ನೋಡುವುದು ಬೇಡ ಎಂದು ಅರ್ಜಿದಾರರಾದ ಅಭಯ್‌ ಭಕ್ಚಂದ್‌ , ಅರುಣ್‌ಕುಮಾರ್‌ ಅಗರವಾಲ್‌ ಅವರುಗಳಿಗೆ ಸಲಹೆ ಮಾಡಿತು.

Advertisement
Tags :
BJPCongressEVMGOVERNMENTindiaKARNATAKALatestNews
Advertisement
Next Article