ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮದರಸಾ ಶಿಕ್ಷಣ ಕಾಯ್ದೆ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

'ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004'ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ' ಎಂದು ಅಲಹಾಬಾದ್ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.
03:41 PM Apr 05, 2024 IST | Ashitha S

ನವದೆಹಲಿ: 'ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004'ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ' ಎಂದು ಅಲಹಾಬಾದ್ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

Advertisement

ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ, ಮನೋಜ್ ಮಿಶ್ರ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿತು.

ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಜಾರಿಗೊಳಿಸುವುದರಿಂದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂಬ ಅಲಹಾಬಾದ್ ಹೈಕೋರ್ಟ್‌ನ ತೀರ್ಪು ಸರಿಯಲ್ಲ ಎಂದು ನ್ಯಾಯಪೀಠವು ಹೇಳಿದೆ.

Advertisement

ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಿರ್ದಿಷ್ಟ ಶಿಕ್ಷಣವನ್ನು ಆಯ್ಕೆ ಮಾಡುವ ಅಧಿಕಾರ ಇದ್ದೇ ಇರುತ್ತದೆ. ಹಾಗಾಗಿ ಹೈಕೋರ್ಟ್‌ನ ತೀರ್ಪು 17 ಲಕ್ಷ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಹಕ್ಕುಗಳು ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.

ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವಲ್ಲಿ ರಾಜ್ಯಗಳು ಕಾನೂನುಬದ್ಧ ಹಿತಾಸಕ್ತಿಗಳನ್ನು ಹೊಂದಿವೆ. ಈ ಉದ್ದೇಶಕ್ಕಾಗಿ ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಬೇಕೇ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂದು ಪೀಠ ಹೇಳಿದೆ.

ಇದೇ ವೇಳೆ ಮಾರ್ಚ್‌ 22ರಂದು ಅಲಹಾಬಾದ್ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

Advertisement
Tags :
BreakingNewsindiaKARNATAKALatestNewsNewsKannadaನವದೆಹಲಿಮದರಸಾಹೈಕೋರ್ಟ್‌
Advertisement
Next Article