ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನಕ್ಕೂ ಸುಪ್ರೀಂ ಅಸ್ತು

ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ನೀಡಿರುವುದಕ್ಕೂ ಸುಪ್ರೀಂಕೋರ್ಟ್‌ ಇಂದು(ಡಿ.11) ಎತ್ತಿ ಹಿಡಿದಿದೆ.
02:19 PM Dec 11, 2023 IST | Ashitha S

ನವದೆಹಲಿ: ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ನೀಡಿರುವುದಕ್ಕೂ ಸುಪ್ರೀಂಕೋರ್ಟ್‌ ಇಂದು(ಡಿ.11) ಎತ್ತಿ ಹಿಡಿದಿದೆ.

Advertisement

ಜಮ್ಮು ಮತ್ತು ಕಾಶ್ಮೀರದಲ್ಲಿ, 2024 ರ ಸೆಪ್ಟೆಂಬರ್ 30 ರೊಳಗೆ ಚುನಾವಣೆಯನ್ನು ನಡೆಸುವಂತೆ ಮತ್ತು ಶೀಘ್ರ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವಂತೆಯೂ ಸುಪ್ರೀಂ ಕೋರ್ಟ್ ಹೇಳಿದೆ.

ಆದರೆ, ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗೇ ಇರಿಸಲು ಸೂಚಿಸಿದೆ. ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಲಡಾಖ್‌ಗೆ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಿತ್ತು. ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುತ್ತೆ. ಆದರೆ, ಲಡಾಖ್‌ ಪ್ರದೇಶವನ್ನು ರಾಜ್ಯಕ್ಕೆ ಸೇರಿಸುವ ಬಗ್ಗೆ ಸಮಸ್ಯೆ ಇದ್ದು, ಈ ಹಿನ್ನೆಲೆ ಈ ವಿಚಾರ ಇತ್ಯರ್ಥವಾಗಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ಹೇಳಿದರು. ಈ ಹಿನ್ನೆಲೆ ಲಡಾಖ್‌ ಅನ್ನು ಹಾಗೇ ಬಿಡಲು ಸುಪ್ರೀಂಕೋರ್ಟ್‌ ಹೇಳಿದೆ.

Advertisement

ಈ ಮಧ್ಯೆ, ಸಂವಿಧಾನದ 370ನೇ ವಿಧಿ ತಾತ್ಕಾಲಿಕ ನಿಬಂಧನೆಯಾಗಿದೆ ಮತ್ತು ಅದನ್ನು ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ ಎಂದೂ ಸುಪ್ರೀಂಕೋರ್ಟ್‌ ಪಂಚ ಸದಸ್ಯ ಸಾಂವಿಧಾನಿಕ ಪೀಠ ತೀರ್ಪನ್ನು ಬರೆಯುವಾಗ ಹೇಳಿದೆ.

ಇತ್ತ ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ "ಸಾಂವಿಧಾನಿಕ ವಂಚನೆ" ಇಲ್ಲ ಎಂದು ಹೇಳುವ ಮೂಲಕ 370 ನೇ ವಿಧಿಯನ್ನು ರದ್ದುಗೊಳಿಸುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು.

 

 

 

Advertisement
Tags :
GOVERNMENTindiaKARNATAKALatestNewsNewsKannadaನವದೆಹಲಿಲಡಾಖ್‌
Advertisement
Next Article