ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೇ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
12:00 PM Dec 23, 2023 IST | Ashika S

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೇ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.

Advertisement

ಘಟನೆ ಬೆನ್ನಲ್ಲೇ ಶಾಲೆಯ ಮುಖ್ಯ ಶಿಕ್ಷಕಿಯ ಲಕ್ಷಿದೇವಮ್ಮ ಅವರನ್ನು ಅಮಾನತುಗೊಳಿಸಲಾಗಿದೆ.

ಶಿಕ್ಷಕಿಯು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ವಿಡಿಯೋ ವೈರಲ್ ಆಗಿದ್ದು, ಆಕ್ರೋಶಗೊಂಡ ಮಕ್ಕಳ ಪೋಷಕರು ಶುಕ್ರವಾರ ಶಾಲೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.

Advertisement

ಇದರ ಬೆನ್ನಲ್ಲೇ ಪ್ರಕರಣ ರಾಜಕೀಯ ತಿರುವು ಕೂಡ ಪಡೆದುಕೊಂಡಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್, ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ದೂರು ಸ್ವೀಕರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಶಾಲೆಯ ಮುಕ್ಯ ಶಿಕ್ಷಕಿ ಲಕ್ಷಿದೇವಮ್ಮ ಅವರನ್ನುಅಮಾನತುಗೊಳಿಸಿದ್ದು, ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮವಹಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸ್ಥಳೀಯ ಬಿಇಒ ಆಂಜಿನಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಶಿಕ್ಷಕರು ನಿಯಮ ಉಲ್ಲಂಘಿಸಿದ್ದಾರೆ. ಇದನ್ನು ಇಲಾಖೆಯ ಡಿಡಿಪಿಐ ಮತ್ತು ಆಯುಕ್ತರ ಗಮನಕ್ಕೆ ತರಲಾಗಿದ್ದು, ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದರು.

Advertisement
Tags :
LatetsNewsNewsKannadaಅಂದ್ರಹಳ್ಳಿಶಾಲಾ ಶೌಚಾಲಯಸರ್ಕಾರಿ ಶಾಲೆಸ್ವಚ್ಛ
Advertisement
Next Article