ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಬುಧವಾರ) ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
05:21 PM Apr 09, 2024 IST | Chaitra Kulal

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಬುಧವಾರ) ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

Advertisement

Advertisement
Tags :
BANGALOREEXAMLatestNewsNewsKarnatakaPUCresultwebsite
Advertisement
Next Article