ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.
10:36 AM Dec 17, 2023 IST | Ashika S

ದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

Advertisement

ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, ಎಲ್ಲಾ ಆರೋಪಿಗಳ ಫೋನ್‌ಗಳು ಲಲಿತ್ ಝಾ ಬಳಿ ಇತ್ತು ಎನ್ನಲಾಗಿದೆ. ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‌ಗಳನ್ನು ಸುಟ್ಟು ಹಾಕಿದ್ದಾಗಿ ಲಲಿತ್ ಝಾ ಒಪ್ಪಿಕೊಂಡಿದ್ದ.

ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು.

Advertisement

ಡಿಸೆಂಬರ್ 13 ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್​ನನ್ನೂ ಪೊಲೀಸರು ಬಂಧಿಸಿದ್ದಾರೆ.

Advertisement
Tags :
LatetsNewsNewsKannadaಆರೋಪಿಪ್ರಕರಣಬಿಡಿ ಭಾಗಭದ್ರತಾ ಉಲ್ಲಂಘನೆಮೊಬೈಲ್‌
Advertisement
Next Article