ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಯಾಮರಣ ಕೋರಿ ಪೊಲೀಸ್‌ ಸಿಬ್ಬಂದಿಯಿಂದ ರಾಷ್ಟ್ರಪತಿಗೆ ಪತ್ರ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿರುವ ಪೊಲೀಸ್‌ ಸಿಬ್ಬಂದಿ ಒಬ್ಬರು ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.
12:27 PM Feb 24, 2024 IST | Ashika S

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿರುವ ಪೊಲೀಸ್‌ ಸಿಬ್ಬಂದಿ ಒಬ್ಬರು ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

Advertisement

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಪತಿ ಒಂದೆಡೆ ಆದ್ರೆ ಪತ್ನಿ ಇನ್ನೊಂದೆಡೆ ಇದರಿಂದಾಗಿ ಇಬ್ಬರ ನಡುವೆ ಯಾವುದೆ ಸಾಮರಸ್ಯವಿಲ್ಲ, ತಂದೆ, ತಾಯಿ ಮತ್ತು ಮಕ್ಕಳಿಂದ ಸಹ ದೂರವಿರುವಂತೆ ಆಗಿದೆ. ಇದು ವಿಚ್ಛೇದನಕ್ಕೂ ದಾರಿ ಮಾಡಿ ಕೊಟ್ಟಿದೆ. ಕೆಲರಿಗೆ ಮನೆ ತಂದೆ ತಾಯಿ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ ಹೀಗಾಗಿ ನೊಂದ ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ.

ಪತಿ-ಪತ್ನಿಯರಿಗೆ ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆ‌ರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು ಕೊಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್​ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ಈ ಕುರಿತು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ ಆದರೆ ಯಾವುದೆ ಪ್ರತಿಕ್ರಿಯೆ ಇಲ್ಲ ಎಂದಿದ್ದಾರೆ.

Advertisement

ಎಷ್ಟೇ ಮನವಿ ಸಲ್ಲಿಸಿದರು ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ.

ನಮ್ಮ ಮನೆಗೆ ನಾವೆ ನೆಂಟರಂತೆ ಆಗಿದ್ದೇವೆ, ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ. ಇನ್ನೂ ಕೆಲವರಿಗೆ ಮದುವೆ ಆಗಿ 5 ವರ್ಷವಾದರು ಮಕ್ಕಳಿಲ್ಲ. ನಮ್ಮದು ಶಿಸ್ತಿನ ಇಲಾಖೆ ಆದಕಾರಣ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶವಿಲ್ಲ.

ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ. ಹೀಗಾಗಿ ಜೀವನದಲ್ಲಿ ನೆಮ್ಮದಿ ಇಲ್ಲ,ಆರೋಗ್ಯದಲ್ಲೂ ಏರುಪೇರು ಉಂಟಾಗಿದೆ. ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು ನೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ”. ಎಂದು ಪೊಲೀಸ್​ ಸಿಬ್ಬಂದಿ ಪತ್ರ ಬರೆದಿದ್ದಾರೆ.

Advertisement
Tags :
LatetsNewsNewsKannadaದಯಾಮರಣಪೊಲೀಸ್ ಇಲಾಖೆಮುಖ್ಯಮಂತ್ರಿ ಸಿದ್ದರಾಮಯ್ಯಸಿಬ್ಬಂದಿ
Advertisement
Next Article