For the best experience, open
https://m.newskannada.com
on your mobile browser.
Advertisement

ಉಡುಪಿಯ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ ಸೆಹ್ವಾಗ್

ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಮಾಲ್ಡೀವ್ಸ್ ಖ್ಯಾತೆ ತೆಗೆದಿದೆ. ಹೀಗಾಗಿ ಬಾಲಿವುಡ್ ಸೆಲೆಬ್ರೆಟಿಗಳು, ಕ್ರಿಕೆಟಿಗರು ಹಾಗೂ ಬಹುತೇಕ ಭಾರತೀಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಕರೆ ನೀಡಿದ್ದಾರೆ. ಜೊತೆಗೆ ಭಾರತದ ಅತ್ಯಂತ ಸುಂದರ ತಾಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ.
04:09 PM Jan 08, 2024 IST | Ashitha S
ಉಡುಪಿಯ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ ಸೆಹ್ವಾಗ್

ದೆಹಲಿ: ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಮಾಲ್ಡೀವ್ಸ್ ಖ್ಯಾತೆ ತೆಗೆದಿದೆ. ಹೀಗಾಗಿ ಬಾಲಿವುಡ್ ಸೆಲೆಬ್ರೆಟಿಗಳು, ಕ್ರಿಕೆಟಿಗರು ಹಾಗೂ ಬಹುತೇಕ ಭಾರತೀಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಕರೆ ನೀಡಿದ್ದಾರೆ. ಜೊತೆಗೆ ಭಾರತದ ಅತ್ಯಂತ ಸುಂದರ ತಾಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ.

Advertisement

ಇದೀಗ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿಯ ತ್ರಾಸಿ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದಾರೆ. ಹೌದು. . ಉಡುಪಿಯ ತ್ರಾಸಿ ಬೀಚ್, ಪಾಂಡಿಚೇರಿಯ ಪ್ಯಾರಡೈಸ್ ಬೀಚ್, ಅಂಡಮಾನ್ ನಿಕೋಬಾರ್‌ನ ನೈಲ್ ಹಾಗೂ ಹ್ಯಾವ್ಲಾಕ್ ಬೀಚ್ ಫೋಟೋಗಳನ್ನು ಸೆಹ್ವಾಗ್ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಹಲವರು ಅನ್ವೇಷಿಸಿದ ಸ್ಥಳಗಳಿವೆ. ಈ ತಾಣಗಳಿಗೆ ಮೂಲಸೌಕರ್ಯ ಒದಗಿಸಿದರೆ ಯಾವುದಕ್ಕೂ ಕಡಿಮೆ ಇಲ್ಲ. ಪರಿಸ್ಥಿತಿಯನ್ನು ಅವಕಾಶವಾಗಿ ಪರಿವರ್ತಿಸುವುದು ಭಾರತಕ್ಕೆ ತಿಳಿದಿದೆ.

ಮಾಲ್ಡೀವ್ಸ್ ಸಚಿವರು ಭಾರತ ಹಾಗೂ ಪ್ರಧಾನ ಮಂತ್ರಿಯನ್ನು ನಿಂದಿಸಿರುವ ಈ ಸಂದರ್ಭವನ್ನು ಉತ್ತಮ ಅವಕಾಶವಾಗಿ ಬಳಸಿಕೊಂಡು ನಮ್ಮ ಸುಂದರ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ನೀಡಿ ಆರ್ಥಿಕತೆಯ ವೇಗ ಹೆಚ್ಚಿಸಬೇಕಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

Advertisement

ಇಷ್ಟೇ ಅಲ್ಲ ಸೆಹ್ವಾಗ್ ಉಡುಪಿ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಉಡುಪಿ ನಿಜಕ್ಕೂ ಅದ್ಭುತ.ಅತ್ಯಂತ ಸುಂದರ ಕಡಲತೀರ, ಪ್ರಾಚೀನ ದೇವಾಲಯ ಹಾಗೂ ಅತ್ಯುತ್ತಮ ಆಹಾರದಿಂದ ಉಡುಪಿ ಅಚ್ಚುಮೆಚ್ಚು ಎಂದಿದ್ದಾರೆ.

Advertisement
Tags :
Advertisement