ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿ.ವೈ ವಿಜಯೇಂದ್ರ ಸೇರಿ ಹಲವು ‘ಬಿಜೆಪಿ ನಾಯಕ’ರ ಬಂಧನ !

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
04:18 PM Feb 07, 2024 IST | Ashitha S

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಇದಕ್ಕೂ ಮುನ್ನಾ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ದೆಹಲಿ ಚಲೋ ಮಾಡಿದ ಕಾಂಗ್ರೆಸ್ಸಿಗರಿಗೆ ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಪಾಠ ಕಲಿಸುತ್ತಾರೆ ಎಂದುವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರವು ಬರಗಾಲದ ಸಂದರ್ಭದಲ್ಲೂ ಸಮರ್ಪಕವಾಗಿ ವಿದ್ಯುತ್ ನೀಡಿತ್ತು. ಆದರೆ, ಕಾಂಗ್ರೆಸ್ ಸರಕಾರವು ಸರಿಯಾಗಿ ವಿದ್ಯುತ್ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ಸಂಬಂಧಿತ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು. ಸರಕಾರವು ತನ್ನ ಖಜಾನೆಯನ್ನು ಖಾಲಿ ಮಾಡಿಕೊಂಡಿದೆ. ದೆಹಲಿ ಚಲೋ ಮೂಲಕ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಅಸಮರ್ಥ ಆಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲೆಗಳಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

Advertisement

 

Advertisement
Tags :
BJPCongressGOVERNMENTindiaKARNATAKALatestNewsNewsKannadaಬಿ.ವೈ. ವಿಜಯೇಂದ್ರಬಿಜೆಪಿಬೆಂಗಳೂರು
Advertisement
Next Article