ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಡ್ಯಾರ್: ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ !

ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿದ ಆರೋಪದಲ್ಲಿ ಹಲವರು ಅಸ್ವಸ್ಥಗೊಂಡಿದ್ದಾರೆ.
11:00 AM Apr 11, 2024 IST | Ashitha S

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿದ ಆರೋಪದಲ್ಲಿ ಹಲವರು ಅಸ್ವಸ್ಥಗೊಂಡಿದ್ದಾರೆ.

Advertisement

ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್‌ಕ್ರೀಂ ಘಟಕದಲ್ಲಿ ಪ್ರತಿ ಲೀಟರ್‌ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು ಜನ ಅದನ್ನು ಖರೀದಿಸುತ್ತಾರೆ.

ಇನ್ನು ಬುಧವಾರ ವಾಟ್ಸ್ ಆ್ಯಪ್ ಮೂಲಕ ದೂರು ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆಹಾರ ಭದ್ರತಾ ಅಧಿಕಾರಿ ಐಸ್​ಕ್ರೀಂ ಘಟಕಕ್ಕೆ ಭೇಟಿ ನೀಡಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.

Advertisement

ಇದರ ಬೆನ್ನಲ್ಲೇ ಇಡೀ ಕಾರ್ಖಾನೆಯನ್ನು ಬಂದ್ ಮಾಡಿ ಸ್ವಚ್ಛಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನೂ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದರು.

Advertisement
Tags :
GOVERNMENTindiaKARNATAKALatestNewsNewsKarnatakaಅಡ್ಯಾರ್‌ಮಂಗಳೂರು
Advertisement
Next Article