ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಿಐಡಿಗೆ ತನಿಖೆ ವರ್ಗಾವಣೆ

ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
01:49 PM Mar 15, 2024 IST | Ashika S

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

Advertisement

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ  ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

Advertisement

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ.

Advertisement
Tags :
AT BENGALURULatetsNewsNewsKannadaಬಿಜೆಪಿವರ್ಗಾವಣೆ
Advertisement
Next Article