For the best experience, open
https://m.newskannada.com
on your mobile browser.
Advertisement

 ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ  ವಶಕ್ಕೆ ಪಡೆದಿದ್ದಾರೆ.
08:39 AM May 11, 2024 IST | Ashika S
 ಲೈಂಗಿಕ ದೌರ್ಜನ್ಯ ಆರೋಪ  ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ:  ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ  ವಶಕ್ಕೆ ಪಡೆದಿದ್ದಾರೆ.

Advertisement

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಬ್ಯಾಗ್ ಸಮೇತ ಇನ್ನೋವಾ ಕಾರಿನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ವೇಳೆ ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಎಸ್‌ಐ ಅರುಣ್ ನೇತೃತ್ವದಲ್ಲಿ ಹಾಸನ ಪೊಲೀಸರು ದೇವರಾಜೇಗೌಡರನ್ನು ವಶಕ್ಕೆ ಪಡೆದು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದಾರೆ.  ಇಂದು ಸಂಜೆಯೊಳಗೆ ದೇವರಾಜೇಗೌಡರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

Advertisement
Tags :
Advertisement