ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಿಂಗ್​​​ ಶಾರುಖ್​ ಬರ್ತ್​​ಡೇಗೆ ‘ಡಂಕಿ’ ಟೀಸರ್ ಔಟ್

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್​ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 58ನೇ ವಸಂತಕ್ಕೆ ಕಾಲಿಟ್ಟಿರುವ ಬಾದ್ ಷಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ.
11:19 PM Nov 02, 2023 IST | Ashitha S

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್​ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 58ನೇ ವಸಂತಕ್ಕೆ ಕಾಲಿಟ್ಟಿರುವ ಬಾದ್ ಷಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ.

Advertisement

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜು ಸೂಪರ್​ ಹಿಟ್​ ಸಿನಿಮಾಗಳ ನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳುವುದಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಎಣೆದಿರುವ ಡಂಕಿ ಟೀಸರ್​​ಗೆ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ.

ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ.  ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ.  ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

Advertisement

Advertisement
Tags :
indiaKARNATAKALatestNewsLatetsNewsNewsKannadaಟೀಸರ್ ಔಟ್ಡಂಕಿ
Advertisement
Next Article