For the best experience, open
https://m.newskannada.com
on your mobile browser.
Advertisement

ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ 'ಶಾಖಾಹಾರಿ'

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ಶಾಖಾಹಾರಿ' ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
07:28 AM Feb 16, 2024 IST | Ashika S
ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ  ಶಾಖಾಹಾರಿ

ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ಶಾಖಾಹಾರಿ' ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Advertisement

ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಅಡುಗೆ ಭಟ್ಟರಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಶಿವಮೊಗ್ಗದ ಗಂಗಕರ್ಮಿ ಎಸ್​ ಆರ್​ ಗಿರೀಶ್​ ಅವರ ನಾಟಕದ ಸಣ್ಣ ತುಣುಕೊಂದನ್ನು ಆಧಾರವಾಗಿಟ್ಟುಕೊಂಡು ಶಾಖಾಹಾರಿ ಚಿತ್ರಕತೆ ಬರೆಯಲಾಗಿದೆ. ಮಲೆನಾಡಿನ ತಪ್ಪಲಿನಲ್ಲೇ ಈ ಸಿನಿಮಾ ಚಿತ್ರೀಕರಣಗೊಂಡಿದೆ. ಮಲೆನಾಡಿನ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Advertisement

ಈ ಚಿತ್ರವನ್ನ ಸಂದೀಪ್ ಸುಂಕದ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ವಿನಯ್ ಯು ಜೆ, ನಿಧಿ ಹೆಗಡೆ, ಹರಿಣಿ ಶ್ರೀಕಾಂತ್, ಸುಜಯ್ ಶಾಸ್ತ್ರಿ, ಪ್ರಶಾಂತ್​ ನಟನ, ಶ್ರೀಹರ್ಷ ಗೋಭಟ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Advertisement
Tags :
Advertisement