For the best experience, open
https://m.newskannada.com
on your mobile browser.
Advertisement

ಫೋಟೋ ತೆಗೆಯಲು ಬಂದ ಅಭಿಮಾನಿಗೆ ಥಳಿಸಿದ ಶಕಿಬ್ ಅಲ್ ಹಸನ್‌

ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ ಘಟನೆ ನಡೆದಿದೆ.
04:07 PM May 08, 2024 IST | Chaitra Kulal
ಫೋಟೋ ತೆಗೆಯಲು ಬಂದ ಅಭಿಮಾನಿಗೆ ಥಳಿಸಿದ ಶಕಿಬ್ ಅಲ್ ಹಸನ್‌

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ ಘಟನೆ ನಡೆದಿದೆ.

Advertisement

ಈ ವಿಡಿಯೊ ವೈರಲ್ ಆಗಿದ್ದು ಶಕಿಬ್​​ ವರ್ತನೆ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಳಿದ್ದಾರೆ.

ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ.

Advertisement

ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್, ಇಲ್ಲ ಫೋಟೋ ತೆಗೆಸಿಕೊಳ್ಳಲ್ಲ ಇಲ್ಲಿಂದ ಹೋಗು ಎಂದು ​ಸೂಚನೆ ನೀಡಿದ್ದಾರೆ. ಆದರೂ ಕೂಡ ಅಭಿಮಾನಿ ಮತ್ತೆ ಮತ್ತೆ ಫೋಟೊ ತೆಗೆಯಲು ಒತ್ತಾಯಿಸಿದಾಗ, ಅವರ ಕುತ್ತಿಗೆಗೆ ಕೈಹಾಕಿದ ಶಾಕಿಬ್ ಹೊಡೆಯಲು ಮುಂದಾದರು. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

ಶಕಿಬ್‌ ಅವರು ಈ ರೀತಿ ತಾಳ್ಮೆ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

Advertisement
Tags :
Advertisement