ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಪಘಾತ ಬಳಿಕ ವ್ಯಕ್ತಿಯ ಜೀವ ಉಳಿಸಿದ ಮೊಹಮ್ಮದ್‌ ಶಮಿ

ಡೆಹ್ರಾಡೂನ್:‌ ವಿಶ್ವಕಪ್‌ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಮೊಹಮ್ಮದ್‌ ಶಮಿ ಅವರು ದೇಶದ ಜನರ ಮನಗೆದ್ದಿದ್ದಾರೆ.
11:15 AM Nov 26, 2023 IST | Ashitha S

ಡೆಹ್ರಾಡೂನ್:‌ ವಿಶ್ವಕಪ್‌ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಮೊಹಮ್ಮದ್‌ ಶಮಿ ಅವರು ದೇಶದ ಜನರ ಮನಗೆದ್ದಿದ್ದಾರೆ.

Advertisement

ಇದರ ಬೆನ್ನಲ್ಲೇ, ಅಪಘಾತದ ಬಳಿಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರ ಪ್ರಾಣವನ್ನು ಉಳಿಸುವ ಮೂಲಕ ಮೊಹಮ್ಮದ್‌ ಶಮಿ ಅವರು ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮೊಹಮ್ಮದ್‌ ಶಮಿ ಅವರೇ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. 'ಒಂದು ಜೀವ ಉಳಿಸಿದ ಖುಷಿ ನನ್ನದಾಯಿತು. ಈ ವ್ಯಕ್ತಿ ತುಂಬ ಅದೃಷ್ಟವಂತ. ಉತ್ತರಾಖಂಡದ ನೈನಿತಾಲ್‌ ಬಳಿ ಈಗಷ್ಟೇ ಕಾರೊಂದು ಬೆಟ್ಟದಿಂದ ಕೆಳಗೆ ಬಿತ್ತು. ಕಾರಿನಲ್ಲಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಇದರಿಂದ ಕಾರಿನಲ್ಲಿದ್ದ ವ್ಯಕ್ತಿಗೆ ಮರು ಜನ್ಮ ಸಿಕ್ಕಂತಾಗಿದೆ' ಎಂದು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಜನರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

https://www.instagram.com/reel/C0E3eCFCB3U/?utm_source=ig_embed&ig_rid=276995ca-4e15-4ab4-ab06-1530bab53eda

Advertisement
Tags :
indiaLatestNewsNewsKannadaನವದೆಹಲಿಮೊಹಮ್ಮದ್ ಶಮಿ
Advertisement
Next Article