For the best experience, open
https://m.newskannada.com
on your mobile browser.
Advertisement

ಮೇ 10 ರಂದು ಬಿಡುಗಡೆಯಾಗಲಿದೆ ಶರಣ್ ಅಭಿನಯದ ಛೂ‌ ಮಂತರ್

ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ‌ ಮಂತರ್ ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ.
10:51 AM Apr 17, 2024 IST | Ashika S
ಮೇ 10 ರಂದು ಬಿಡುಗಡೆಯಾಗಲಿದೆ ಶರಣ್ ಅಭಿನಯದ ಛೂ‌ ಮಂತರ್

ಬೆಂಗಳೂರು: ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ‌ ಮಂತರ್ ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Advertisement

ಏಪ್ರಿಲ್ 19 ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ಕರ್ವ ಖ್ಯಾತಿಯ ನವನೀತ್ ನಿರ್ದೇಶಿಸಿರುವ “ಛೂ ಮಂತರ್”  ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ ಜನರ ಮನ ತಲುಪಿದೆ.

Advertisement

ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ಉಪಾಧ್ಯಕ್ಷನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಈ ಚಿತ್ರದಲ್ಲಿ ಒಟ್ಟಾಗಿ ನೋಡಬಹುದು. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ.

ಇದೊಂದು ಹಾರಾರ್ ಚಿತ್ರ.‌ ಕನ್ನಡದಲ್ಲಿ ಸಾಕಷ್ಟು ಹಾರಾರ್ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನವಾಗಿದೆ. ಚಿತ್ರದ ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ.

ಕರ್ವ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ನವನೀತ್ ಅವರಿಂದ ಮತ್ತೊಂದು ಸದಭಿರುಚಿಯ ಚಿತ್ರ ಬರುತ್ತಿದೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Advertisement
Tags :
Advertisement