ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕಿಸ್ತಾನಕ್ಕೆ ನೂತನ ಪ್ರಧಾನಿ ಹೆಸರು ಘೋಷಣೆ..!

ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇಮ್ರಾನ್ ಖಾನ್ ಸರ್ಕಾರ ಪತನವಾದ ನಂತರ ಶಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಿದ್ದರು.  
10:01 AM Feb 14, 2024 IST | Ashitha S

ಪಾಕಿಸ್ತಾನ: ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇಮ್ರಾನ್ ಖಾನ್ ಸರ್ಕಾರ ಪತನವಾದ ನಂತರ ಶಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಿದ್ದರು.

Advertisement

ಪಕ್ಷದ ವರಿಷ್ಠ ನವಾಜ್ ಷರೀಫ್ (74) ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಹುದ್ದೆಗೆ ಶಿಫಾರಸು ಮಾಡಿದ್ದಾರೆ. ಜೊತೆಗೆ ಪುತ್ರಿ ಮರ್ಯಮ್ ನವಾಜ್ (50) ಅವರನ್ನು ಪಂಜಾಬ್ ಪ್ರಾಂತ್ಯ ಮುಖ್ಯಮಂತ್ರಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ.

ನವಾಜ್ ಷರೀಫ್ ಅವರು ಪಿಎಂಎಲ್-ಎನ್ (ಮುಂದಿನ ಸರ್ಕಾರ ರಚಿಸಲು) ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಅಂತಹ ನಿರ್ಧಾರಗಳು ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲಿದೆ ಎನ್ನುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಿಎಂಎಲ್-ಎನ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಪ್ರಯತ್ನಿಸುವುದಾಗಿ ಘೋಷಿಸಿದೆ.

Advertisement

ಇನ್ನು ಪ್ರಧಾನಿ ಹುದ್ದೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಬಿಲಾವಲ್, ತಮ್ಮ ಪಕ್ಷವು ಸರ್ಕಾರದ ಭಾಗವಾಗದೆ ಪ್ರಧಾನಿ ಹುದ್ದೆಗೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು. ಪಾಕಿಸ್ತಾನದ ಪ್ರಸ್ತುತ ಅಧ್ಯಕ್ಷ , ಡಾ. ಆರಿಫ್ ಅಲ್ವಿ ಮುಂದಿನ ತಿಂಗಳು ತಮ್ಮ ಹುದ್ದೆಯನ್ನು ತೊರೆಯಲಿದ್ದಾರೆ.

 

 

 

Advertisement
Tags :
indiaLatestNewsNewsKannadaPML-NprimeministerShehbaz Sharifನವದೆಹಲಿ
Advertisement
Next Article