ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ನಿಧನ

ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬಾಬರ್ ಅವರು ಏಕನಾಥ್ ಶಿಂದೆ ಅವರ ಶಿವಸೇನಾ ಬಣದಲ್ಲಿ ಗುರುತಿಸಿಕೊಂಡಿದ್ದರು. 
10:54 AM Jan 31, 2024 IST | Ashitha S

ಮುಂಬೈ: ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಬಾಬರ್ ಅವರು ಏಕನಾಥ್ ಶಿಂದೆ ಅವರ ಶಿವಸೇನಾ ಬಣದಲ್ಲಿ ಗುರುತಿಸಿಕೊಂಡಿದ್ದರು.

Advertisement

ಸಾಂಗ್ಲಿ ಜಿಲ್ಲೆಯ ಖಾನಾಪುರದಿಂದ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1990 ಮತ್ತು 1999ರ ವಿಧಾನಸಭೆ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದ ಅವರು, 2014 ಮತ್ತು 2019ರಲ್ಲಿ ಅವಿಭಜಿತ ಶಿವಸೇನಾ ಪಕ್ಷದಿಂದ ಆಯ್ಕೆಯಾಗಿದ್ದರು.

ಬಾಬರ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು ಮಾಡಿರುವ ಮುಖ್ಯಮಂತ್ರಿ ಏಕನಾಥ್ ಶಿಂದೆ, ಬಾಬರ್ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaಅನಿಲ್ ಬಾಬರ್ಶಿವಸೇನಾ ಶಾಸಕ
Advertisement
Next Article