For the best experience, open
https://m.newskannada.com
on your mobile browser.
Advertisement

ಧೈರ್ಯಶಾಲಿ ಸಾಮ್ರಾಟ ಛತ್ರಪತಿ ಶಿವಾಜಿಯ ಜಯಂತಿ ಏಕೆ ಆಚರಿಸುತ್ತಾರೆ ಗೊತ್ತಾ?

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರು 1870 ರಲ್ಲಿ ಪ್ರಾರಂಭಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಮೊದಲು ಪುಣೆಯಲ್ಲಿ ಆಚರಿಸಲಾಯಿತು. ಮರಾಠ ರಾಜನ ಜಯಂತಿಯನ್ನು ಆಚರಿಸುವ ಸಂಪ್ರದಾಯವನ್ನು ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕರು ಮುಂದುವರಿಸಿದರು. ಶಿವಾಜಿಯ ಕೊಡುಗೆಗಳನ್ನು ಜನರಲ್ಲಿ ಎತ್ತಿ ಹಿಡಿದರು.
10:51 AM Feb 19, 2024 IST | Ashitha S
ಧೈರ್ಯಶಾಲಿ ಸಾಮ್ರಾಟ ಛತ್ರಪತಿ ಶಿವಾಜಿಯ ಜಯಂತಿ ಏಕೆ ಆಚರಿಸುತ್ತಾರೆ ಗೊತ್ತಾ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರು 1870 ರಲ್ಲಿ ಪ್ರಾರಂಭಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಮೊದಲು ಪುಣೆಯಲ್ಲಿ ಆಚರಿಸಲಾಯಿತು. ಮರಾಠ ರಾಜನ ಜಯಂತಿಯನ್ನು ಆಚರಿಸುವ ಸಂಪ್ರದಾಯವನ್ನು ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕರು ಮುಂದುವರಿಸಿದರು. ಶಿವಾಜಿಯ ಕೊಡುಗೆಗಳನ್ನು ಜನರಲ್ಲಿ ಎತ್ತಿ ಹಿಡಿದರು.

Advertisement

ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು. ಶಿವಾಜಿ ಅವರು ತಮ್ಮ ಜೀವಿತಾವಧಿಯಲ್ಲಿ ತನ್ನ ಸಾಮ್ರಾಜ್ಯವನ್ನು ಮೊಘಲರಿಂದ ಕಾಪಾಡಿಕೊಳ್ಳಲು ಅನೇಕ ವರ್ಷಗಳ ಕಾಲ ಹೋರಾಡಿದ್ದರು. ಇನ್ನು ಕೆಲವರು ಛತ್ರಪತಿ ಶಿವಾಜಿಯನ್ನು ದೇವರೆಂದೇ ಪರಿಗಣಿಸುತ್ತಾರೆ. ದಕ್ಕಿಣ ಭಾರತದಲ್ಲಿ ಇಂದಿಗೂ ಕೂಡ ಪ್ರಾಚೀನ ಹಿಂದೂ ದೇವಾಲಯಗಳು ಅಳಿಯದೇ ಉಳಿದಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಛತ್ರಪತಿ ಶಿವಾಜಿಯ ನ್ಯಾಯಯುತ ಆಡಳಿತವಾಗಿದೆ.

ಭಾರತ ಭೂಮಿ ಅನಾದಿಕಾಲದಿಂದಲೂ ಅನೇಕ ಬಲಿಷ್ಠ, ಧೈರ್ಯವಂತ, ವೀರ ಯೋಧರು, ಸಾಹಸಿ ವನಿತೆಯರು, ಆಡಳಿತಗಾರರನ್ನು ಹೊಂದಿದೆ. ತಮ್ಮ ತಾಯಿನಾಡು, ಸ್ವರಾಜ್ಯವನ್ನು ರಕ್ಷಿಸಲು ಅದೆಷ್ಟೋ ಮಂದಿ ತಮ್ಮ ಪ್ರಾಣವನ್ನೇ ಬಿಟ್ಟಿದ್ದಾರೆ. ಅಂತಹ ಮಹಾನ್ ಧೈರ್ಯಶಾಲಿ ಯೋಧರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಕೂಡ ಒಬ್ಬರು.

Advertisement

ಛತ್ರಪತಿ ಶಿವಾಜಿ ಮಹಾರಾಜರ ಪೂರ್ಣ ಹೆಸರು ಶಿವಾಜಿರಾಜೆ ಶಹಾಜಿರಾಜೆ ಬೋಂಸ್ಲೆ. ಶಿವಾಜಿ ಮಹಾರಾಜರು ಫೆಬ್ರುವರಿ 19, 1630 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿನ ಶಿವನೇರಿ ಎನ್ನುವ ಕೋಟೆಯಲ್ಲಿ ಜನಿಸಿದರು. ಶಿವಾಜಿ ಮಹಾರಾಜರ ಪಟ್ಟಾಭಿಷೇಕವು ಜೂನ್‌ 6, 1674 ರಂದು ನಡೆಯಿತು. ಶಿವಾಜಿ ಮಹಾರಾಜರು ತಮ್ಮ ಆಡಳಿತಾವಧಿಯಲ್ಲಿ ಪಶ್ಚಿಮ ಮಹಾರಾಷ್ಟ್ರದ ಕೊಂಕಣ, ಸಹ್ಯಾದ್ರಿ ಬೆಟ್ಟಗಳಿಂದ ಪಶ್ಚಿಮ ಮಹಾರಾಷ್ಟ್ರದ ದಕ್ಷಿಣ ಭಾರತದ ತಂಜಾವರ್‌ವರೆಗೆ ತನ್ನ ಸಾಮ್ರಾಜ್ಯವನ್ನು ವಿಸ್ತಿರಿಸಿದ್ದರು. ಶಿವಾಜಿ ಮಹಾರಾಜರು ಜೂನ್‌ 6, 1674 ರಿಂದ ಎಪ್ರಿಲ್‌ 3, 1680 ರವರೆಗೆ ಆಳ್ವಿಕೆಯನ್ನು ಮಾಡಿದ್ದರು.

ಶಿವಾಜಿ ಮಾಹಾರಾಜರ ಆಳ್ವಿಕೆ ಸಮಯದಲ್ಲಿ ರಾಯಗಢ ಕೋಟೆಯನ್ನು ಇಡೀ ಮಹಾರಾಷ್ಟ್ರದ ರಾಜಧಾನಿಯನ್ನಾಗಿ ಮಾಡಲಾಯಿತು. ಶಿವಾಜಿ ಮಹಾರಾಜರಿಗೆ ಇಬ್ಬರು ಗಂಡು ಮಕ್ಕಳಿದ್ದರು. ಒಂದು ಮಗನ ಹೆಸರು ಸಂಭಾಜಿ ಹಾಗೂ ಇನ್ನೋರ್ವ ಮಗನ ಹೆಸರು ರಾಜರಾಮ್‌. ಶಿವಾಜಿ ಮಹಾರಾಜರು ಎಪ್ರಿಲ್‌3, 1680 ರಂದು ರಾಯಗಢ ಕೋಟೆಯಲ್ಲಿ ನಿಧನರಾದರು.

ಶಿವಾಜಿ ಮಹಾರಾಜರು ಹಿಂದೂ ಧರ್ಮಕ್ಕೆ ಸೇರಿದವರು ಹಾಗೂ ಇವರು ಧಾರ್ಮಿಕ ಸಹಿಷ್ಣುಹಿಯಾಗಿದ್ದರು. ಅವರ ಆಡಳಿತದ ಅವಧಿಯಲ್ಲಿ ಹಿಂದೂಗಳು ಮಾತ್ರವಲ್ಲ, ಮುಸ್ಲಿಂರು ಕೂಡ ಸಂಪೂರ್ಣ ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಿದ್ದರು. ಶಿವಾಜಿ ಹಿಂದುಗಳಿಗೆ ಹೇಗೆ ದೇವಾಲಯವನ್ನು ನಿರ್ಮಿಸಲು ಸಹಕಾರವನ್ನು ನೀಡುತ್ತಿದ್ದರು, ಅಷ್ಟೇ ಸಹಕಾರವನ್ನು ಮುಸ್ಲಿಂರಿಗೆ ಮಸೀದಿಯನ್ನು ನಿರ್ಮಿಸಲು ನೀಡುತ್ತಿದ್ದರು. ಎಲ್ಲಾ ಧರ್ಮದವರಿಗೂ ಸಂಪೂರ್ಣ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ್ದರು.

Advertisement
Tags :
Advertisement