For the best experience, open
https://m.newskannada.com
on your mobile browser.
Advertisement

ಸಿದ್ದು, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಹೆಬ್ಬಾರ್ !

ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.
06:36 PM Mar 05, 2024 IST | Ashitha S
ಸಿದ್ದು  ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಹೆಬ್ಬಾರ್

ಕಾರವಾರ: ರಾಜ್ಯಸಭೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಕಾಂಗ್ರೆಸ್​ಗೆ ಲಾಭವಾಗುವಂತೆ ಮಾಡಿದ್ದ ಯಲ್ಲಾಪುರದ ಅಸಮಾಧಾನಿತ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

Advertisement

ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್ ಅವರು ತಮ್ಮ ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದರು.

ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿಗೆ ಆಘಾತ ನೀಡಿದ್ದರು. ಈ ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭಾವಚಿತ್ರ ಹಾಕಿ ಶುಭಕೋರಿರುವುದು ಬಿಜೆಪಿಗೆ ಶಾಕ್‌ ಕೊಟ್ಟಿದೆ.

Advertisement

Advertisement
Tags :
Advertisement