For the best experience, open
https://m.newskannada.com
on your mobile browser.
Advertisement

ಸಲೂನ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರು ಸಾವು

ಸಲೂನ್‌ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯುವಕರು ಸಾವಿಗೀಡಾದ ಘಟನೆ ದೆಹಲಿಯ ನಜಾಫ್‌ಗಢದಲ್ಲಿ ಶುಕ್ರವಾರ ಸಂಭವಿಸಿದೆ.
08:29 PM Feb 09, 2024 IST | Gayathri SG
ಸಲೂನ್‌ನಲ್ಲಿ ಗುಂಡಿನ ದಾಳಿ  ಇಬ್ಬರು ಯುವಕರು ಸಾವು

ದೆಹಲಿ: ಸಲೂನ್‌ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯುವಕರು ಸಾವಿಗೀಡಾದ ಘಟನೆ ದೆಹಲಿಯ ನಜಾಫ್‌ಗಢದಲ್ಲಿ ಶುಕ್ರವಾರ ಸಂಭವಿಸಿದೆ.

Advertisement

ಪಿಲ್ಲರ್ ನಂಬರ್ 80 ರ ಇಂದ್ರ ಪಾರ್ಕ್‌ನಲ್ಲಿರುವ ಸಲೂನ್‌ನಲ್ಲಿ ಹುಡುಗನಿಗೆ ಗುಂಡು ಹಾರಿಸಲಾಗಿದೆ ಎಂದು ಕರೆ ಮಾಡಿದವರು ತಿಳಿಸಿದ್ದಾರೆ. ಇದಲ್ಲದೇ ಗುಂಡು ತಗುಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೋಹನ್ ಗಾರ್ಡನ್ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿದಾಗ ಸೋನು ಮತ್ತು ಆಶಿಶ್ ಎಂಬ ಇಬ್ಬರು ಯುವಕರಿಗೆ ಗುಂಡು ತಗುಲಿದ್ದು, ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಎಫ್‌ಎಸ್‌ಎಲ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

Advertisement

Advertisement
Tags :
Advertisement