For the best experience, open
https://m.newskannada.com
on your mobile browser.
Advertisement

ಬೆಂಗಳೂರಿನಲ್ಲಿ ಸಿದ್ದರಾಮಯ್ಯ, ಡಿಕೆಶಿಯವರೇ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ : ಆರ್.‌ಅಶೋಕ್‌

ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಓಲೈಕೆ ರಾಜಕಾರಣವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
02:36 PM Apr 18, 2024 IST | Chaitra Kulal
ಬೆಂಗಳೂರಿನಲ್ಲಿ ಸಿದ್ದರಾಮಯ್ಯ  ಡಿಕೆಶಿಯವರೇ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ   ಆರ್ ‌ಅಶೋಕ್‌

ಬೆಂಗಳೂರು: ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಓಲೈಕೆ ರಾಜಕಾರಣವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

Advertisement

ಶ್ರೀರಾಮನವಮಿ ಇದ್ದಿದ್ದರಿಂದ ಜೈ ಶ್ರೀರಾಮ್ ಎಂದು ಕೂಗುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ತಂಡ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಹಲ್ಲೆಯನ್ನೂ ನಡೆಸಿತ್ತು. ಇದಕ್ಕೀಗ ರಾಜಕೀಯ ತಿರುವು ಸಿಕ್ಕಿದ್ದು, ಇಂತಹ ಘಟನೆಗೆ ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಅಶೋಕ್‌ ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣವನ್ನು ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗುತ್ತಾರೆ. ಈಗ ರಾಮ ಜಪ ಮಾಡುವವರನ್ನು ತಡೆದು, ಹಲ್ಲೆ ನಡೆಸಿ, ಅಲ್ಲಾಹು ಅಕ್ಬರ್ ಅಂತ ಕೂಗುವಂತೆ ಒತ್ತಾಯ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ. ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ ಎಂದು ಕಿಡಿಕಾರಿದರು.

Advertisement

Advertisement
Tags :
Advertisement