ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿದ್ದರಾಮಯ್ಯ ಸರ್ಕಾರ ಗೊಂದಲದ ಗೂಡಾಗಿದೆ: ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ಬರದಲ್ಲಿ ಬಹುಸಂಖ್ಯಾತರಿಗೆ ಸೆಡ್ಡು ಹೊಡೆಯುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.
11:36 AM Dec 27, 2023 IST | Ashika S

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ಬರದಲ್ಲಿ ಬಹುಸಂಖ್ಯಾತರಿಗೆ ಸೆಡ್ಡು ಹೊಡೆಯುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ದೂರಿದರು.

Advertisement

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗೊಂದಲದ ಗೂಡಾಗಿದೆ. ಅದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ. ಹಿಂದಿನ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಹಿಜಾಬ್ ಗೆ ಅವಕಾಶ ಕೊಡುತ್ತೇವೆ ಎನ್ನುತ್ತಿದ್ದಾರೆ. ಒಮ್ಮೆ ತರುತ್ತೇವೆ ಅಂತಾರೆ, ಮತ್ತೆ ಹೇಳಿಕೆ ಬದಲಿಸುತ್ತಾರೆ. ಕಾಂಗ್ರೆಸ್ ನಾಯಕರು ಚುನಾವಣೆಯ ದೃಷ್ಟಿಕೋನದಲ್ಲಿದೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ಸರ್ವರನ್ನ ಒಳಗೊಳ್ಳುವ ಆಲೋಚನೆ ರಾಜ್ಯ ಸರ್ಕಾರಕ್ಕೆ ಇಲ್ಲ. ಸಿದ್ದರಾಮಯ್ಯನವರ ಹೇಳಿಕೆಯೇ ಇದಕ್ಕೆ ಸಾಕ್ಷಿ. ಸಿದ್ದರಾಮಯ್ಯ ಕಾನೂನು ಕೋರ್ಟ್ ತೀರ್ಪು ಮೀರಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನಡವಳಿಕೆ ರಾಜಕಾರಣಕ್ಕೆ ಭೂಷಣವಲ್ಲ. ಪರಿಷತ್‌ ನ ಒಳಗೆ ಮತ್ತು ಹೊರಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

Advertisement

Advertisement
Tags :
LatetsNewsNewsKannadaಅಲ್ಪಸಂಖ್ಯಾತಕಾಂಗ್ರೆಸ್ಕೆಲಸವಿಧಾನ ಪರಿಷತ್‌ವಿಪಕ್ಷ ನಾಯಕಶ್ರೀನಿವಾಸ ಪೂಜಾರಿಸರಕಾರ
Advertisement
Next Article