For the best experience, open
https://m.newskannada.com
on your mobile browser.
Advertisement

ಗುಟ್ಟಾಗಿ ಮದುವೆಯಾದ ನಟ ಸಿದ್ಧಾರ್ಥ್-ಅದಿತಿ ರಾವ್ ಹೈದರಿ

ಕಳೆದ ಕೆಲ ವರ್ಷಗಳಿಂದ ಒಟ್ಟಿಗೆ ತಿರುಗಾಡುತ್ತಿದ್ದ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರುಗಳು ಗುಟ್ಟಾಗಿ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.
01:54 PM Mar 27, 2024 IST | Ashitha S
ಗುಟ್ಟಾಗಿ ಮದುವೆಯಾದ ನಟ ಸಿದ್ಧಾರ್ಥ್ ಅದಿತಿ ರಾವ್ ಹೈದರಿ

ತೆಲಂಗಾಣ: ಕಳೆದ ಕೆಲ ವರ್ಷಗಳಿಂದ ಒಟ್ಟಿಗೆ ತಿರುಗಾಡುತ್ತಿದ್ದ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರುಗಳು ಗುಟ್ಟಾಗಿ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

Advertisement

ಈ ಜೋಡಿ ಲಿವ್ ಇನ್ ರಿಲೇಷನ್​ಶೀಪ್​ನಲ್ಲಿದೆ, ಆದಷ್ಟು ಬೇಗ ವಿವಾಹವಾಗಲಿದೆ ಎನ್ನಲಾಗಿತ್ತು. ಅದರಂತೆ ಇದೀಗ ತೆಲಂಗಾಣದ ದೇವಾಲಯವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರುಗಳು ಗುಟ್ಟಾಗಿ ಮದುವೆಯಾಗಿದ್ದಾರೆ.

ತೆಲಂಗಾಣದ ವಾನಪರ್ತಿ ಜಿಲ್ಲೆಯ ಶ್ರೀರಂಗಾಪುರದಲ್ಲಿನ ರಂಗನಾಯಕ ಸ್ವಾಮಿ ದೇವಾಲಯದಲ್ಲಿ ಬುಧವಾರ ಮುಂಜಾನೆ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅತ್ಯಂತ ಸರಳವಾಗಿ ವಿವಾಹವಾಗಿದ್ದಾರೆ. ಕೆಲವೇ ಕೆಲವು ಆಪ್ತರು, ಕುಟುಂಬ ಸದಸ್ಯರು ಮಾತ್ರವೇ ಈ ವೇಳೆ ಹಾಜರಿದ್ದರು ಎನ್ನಲಾಗುತ್ತಿದೆ. ಆದರೆ ತಮ್ಮ ಮದುವೆ ಕಾರ್ಯಕ್ರಮವನ್ನು ಈ ಜೋಡಿ ಬಹಳ ಗುಟ್ಟಾಗಿ ಇರಿಸಿದ್ದಾರೆ.ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

Advertisement

Advertisement
Tags :
Advertisement