For the best experience, open
https://m.newskannada.com
on your mobile browser.
Advertisement

ಹೆದ್ದಾರಿಯಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಕಾರು ಅಪಘಾತ

ರಾಬರ್ಟ್​ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ.
10:40 AM Mar 18, 2024 IST | Ashitha S
ಹೆದ್ದಾರಿಯಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಕಾರು ಅಪಘಾತ

ಹೈದರಾಬಾದ್: ರಾಬರ್ಟ್​ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ.

Advertisement

ಗಾಯಕಿ ಮಂಗ್ಳಿ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಅವರ ಕಾರು ಅಪಘಾತವಾಗಿದೆ. ಶಂಶಾಬಾದ್​ ತೊಂಡುಪಲ್ಲಿ ಬಳಿಕ ಟ್ರಕ್​ವೊಂದು ಅವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಮಂಗ್ಳಿ, ಮೇಘರಾಜ್​, ಮನೋಹರ್​ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಇನ್ನು ಟ್ರಕ್​ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಎಂದು ಸದ್ಯ ತಿಳಿದು ಬಂದಿದೆ.

Advertisement

Advertisement
Tags :
Advertisement