For the best experience, open
https://m.newskannada.com
on your mobile browser.
Advertisement

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
09:23 PM May 03, 2024 IST | Ashika S
ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ  ಪೋಕ್ಸೋ ಪ್ರಕರಣ ದಾಖಲು

ನಂಜನಗೂಡು: ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

Advertisement

ಪೋಕ್ಸೋ ಕಾಯಿದೆ ಅಡಿ ಆರೋಪಿ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿಶೀಟರ್ ಆಗಿರುವ ಆರೋಪಿ ಅಪ್ರಾಪ್ತ ಬಾಲಕಿಯ ಸೋದರಮಾವನೇ ಆಗಿದ್ದಾನೆ. ರಾಜೇಶ್ ಅಲಿಯಾಸ್ ದೈತ್ಯರಾಜ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ದಾಖಲಾಗಿದೆ.

ಸಾಕಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ರಾಜೇಶ್@ ದೈತ್ಯರಾಜ್ ರೌಡಿಶೀಟರ್ ಆಗಿದ್ದು ಕಾಂಗ್ರೆಸ್ ಪ್ರಮುಖರಾದ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ಸುನಿಲ್ ಬೋಸ್ ಜೊತೆ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ.

Advertisement

ಸ್ವಂತ ತಂಗಿ ಮಗಳು ಎನ್ನುವುದನ್ನು ಲೆಕ್ಕಿಸದ ಕಾಮುಕ 16 ವರ್ಷದ ಅಪ್ರಾಪ್ತೆಯನ್ನ ಟ್ಯೂಷನ್ ಗೆ ಬಿಡುವುದಾಗಿ ನಂಬಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿ, ಯಾರಿಗೂ ಹೇಳಬೇಡ ಮೊಬೈಲ್ ಕೊಡಿಸುತ್ತೇನೆಂದು ಆಮಿಷ ತೋರಿಸಿ ಕೃತ್ಯ ಮರೆಮಾಚಲು ಯತ್ನಿಸಿದ್ದಾನೆ. ನಂತರ ಅತ್ಯಾಚಾರಕ್ಕೆ ಒಳಗಾದ ಬಾಲಕಿ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಬಾಲಕಿಯ ತಾಯಿ ತನ್ನ ಒಡಹುಟ್ಟಿದ ಅಣ್ಣ ರಾಜೇಶ್ ಅಲಿಯಾಸ್ ದೈತ್ಯರಾಜ್ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement