For the best experience, open
https://m.newskannada.com
on your mobile browser.
Advertisement

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ವಕೀಲ ಅರುಣ್‌ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
04:43 PM May 01, 2024 IST | Nisarga K
ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ
ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ ವಕೀಲ ಅರುಣ್‌ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Advertisement

ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಿರುವ ವಕೀಲ ಅರುಣ್‌, ʻನನ್ನ ಕಕ್ಷಿದಾರ ಪ್ರಜ್ವಲ್‌ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ, ನಂತರ ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರನೆಗೆ ಹಾಜರಾಗುತ್ತಾರೆ. ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ "ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಬರೆದು ಕಾಲವಕಾಶ ಕೋರಿದ್ದಾರೆ"

Advertisement

Advertisement
Tags :
Advertisement