ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಿಎಸ್‌ಟಿ ಸಮಸ್ಯೆಯಿಂದ ಸಣ್ಣ ಕೈಗಾರಿಕೆಗಳು ಮುಚ್ಚುತ್ತಿವೆ: ಕೆ.ಜಯಪ್ರಕಾಶ್ ಹೆಗ್ಡೆ

ಜಿಎಸ್‌ಟಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ಹೊಡೆತ ನೀಡುತ್ತಿದೆ. ಸಣ್ಣ ಉದ್ಯಮಿಗಳು ಇದರಿಂದ ತುಂಬಾ ತೊಂದರೆಗೊಳಗಾಗಿದ್ದಾರೆ. ಇದರಿಂದಾಗಿ ಸಾಕಷ್ಟು ಸಣ್ಣ ಕೈಗಾರಿಕೆಗಳು ಮುಚ್ಚುತ್ತಿವೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಮನ ಹರಿಸಬೇಕಿದೆ. ಸಮಸ್ಯೆ ಇದ್ದಾಗ ಸರಕಾರಗಳು ಸಹಾಯ ಮಾಡಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
08:07 PM Feb 25, 2024 IST | Ashika S

ಉಡುಪಿ: ಜಿಎಸ್‌ಟಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ಹೊಡೆತ ನೀಡುತ್ತಿದೆ. ಸಣ್ಣ ಉದ್ಯಮಿಗಳು ಇದರಿಂದ ತುಂಬಾ ತೊಂದರೆಗೊಳಗಾಗಿದ್ದಾರೆ. ಇದರಿಂದಾಗಿ ಸಾಕಷ್ಟು ಸಣ್ಣ ಕೈಗಾರಿಕೆಗಳು ಮುಚ್ಚುತ್ತಿವೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಮನ ಹರಿಸಬೇಕಿದೆ. ಸಮಸ್ಯೆ ಇದ್ದಾಗ ಸರಕಾರಗಳು ಸಹಾಯ ಮಾಡಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

Advertisement

ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡ್ಬಿ, ವಿಟಿಪಿಸಿ, ಕೆನರಾ ಬ್ಯಾಂಕುಗಳ ಸಹಯೋಗದೊಂದಿಗೆ ಬೆಂಗಳೂರಿನ ಕಾಸಿಯಾ(ಕೆಎಎಸ್‌ಎಸ್‌ಐಎ) ಸಹಯೋಗದೊಂದಿಗೆ ನಗರದ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಬಾರಿಯ ಬಜೆಟ್‌ನಲ್ಲಿ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಸವಲತ್ತು ನೀಡಿಲ್ಲ ಎಂಬುದು ನಿಜ. ಆದರೆ ಎಲ್ಲವನ್ನೂ ಬಜೆಟ್ ಮಂಡನೆಯ ವೇಳೆಯೇ ಪ್ರಕಟಿಸಬೇಕೆಂದಿಲ್ಲ. ನಂತರವೂ ಚರ್ಚೆಯ ವೇಳೆ ಬಜೆಟ್‌ಗೆ ಸೇರಿಸಲು ಸಾಧ್ಯವಿದೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದರೆ ಬಜೆಟ್‌ಗೆ ಉತ್ತರ ನೀಡುವ ವೇಳೆ ಅದನ್ನು ಸೇರಿಸಬಹುದು. ಅಲ್ಲದೇ ಕೈಗಾರಿಕಾ ಕ್ಷೇತ್ರಕ್ಕೆ ನೀಡಿದ ಅನುದಾನವನ್ನೂ ಉಪಯೋಗಿಸಿಕೊಳ್ಳಬಹುದು ಎಂದರು.

Advertisement

Advertisement
Tags :
LatetsNewsNewsKannadaಕೆ.ಜಯಪ್ರಕಾಶ್ ಹೆಗ್ಡೆಜಿಎಸ್‌ಟಿಸಣ್ಣ ಕೈಗಾರಿಕೆಸರಕಾರ
Advertisement
Next Article