For the best experience, open
https://m.newskannada.com
on your mobile browser.
Advertisement

21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್; ಆದರೆ. . . !

ಖ್ಯಾತ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಅವರು ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯನ್ ಪರಿಸರವನ್ನು ರಕ್ಷಿಸಲು ಒತ್ತಾಯಿಸಿ ಕಳೆದ 21ದಿನಗಳಿಂದ ನಡೆಸುತ್ತಿದ್ದ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.
09:06 PM Mar 26, 2024 IST | Ashitha S
21 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್  ಆದರೆ

ಶ್ರೀನಗರ: ಖ್ಯಾತ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಅವರು ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ದುರ್ಬಲವಾದ ಹಿಮಾಲಯನ್ ಪರಿಸರವನ್ನು ರಕ್ಷಿಸಲು ಒತ್ತಾಯಿಸಿ ಕಳೆದ 21ದಿನಗಳಿಂದ ನಡೆಸುತ್ತಿದ್ದ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

Advertisement

ಉಪ್ಪು ಮತ್ತು ನೀರು ಮಾತ್ರ ಸೇವಿಸಿ ವಾಂಗ್‌ಚುಕ್ ಇಲ್ಲಿವರೆಗೆ ಪ್ರತಿಭಟನೆ ನಿರತರಾಗಿದ್ದರು. ಮಂಗಳವಾರ ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಅವರು ತಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ. “ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ಮತ್ತು ಜನರ ರಾಜಕೀಯ ಹಕ್ಕುಗಳಿಗಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಹೇಳಿ ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಉಪವಾಸ ಅಂತ್ಯಗೊಳ್ಳುತ್ತಿದ್ದಂತೆ ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳಲ್ಲಿ ಸಾವಿರಾರು ಜನರು ಜಮಾಯಿಸಿದ್ದು, ಇದೀಗ ಅದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಮಹಿಳಾ ಸಂಘಟನೆಗಳು ಹೇಳಿವೆ.

Advertisement

Advertisement
Tags :
Advertisement