ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯಸಭೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದ್ಯಸರಾಗಿ ಇಂದು (ಫೆ.20) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
05:11 PM Feb 20, 2024 IST | Ashitha S

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದ್ಯಸರಾಗಿ ಇಂದು (ಫೆ.20) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸೋನಿಯಾ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಪ್ರಕಟಿಸಿದ್ದಾರೆ.

ಮಂಗಳವಾರ ನಾಮಪತ್ರ ಹಿಂತೆಗೆಯುವ ಕೊನೆಯ ದಿನಾಂಕವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿಲ್ಲದ ಕಾರಣ ಈ ಮೂವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾವೀರ್ ಪ್ರಸಾದ್ ಶರ್ಮಾ ಘೋಷಿಸಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಬಿಜೆಪಿಯ ಭೂಪೇಂದ್ರ ಯಾದವ್ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಏಪ್ರಿಲ್ 3ರಂದು ಕೊನೆಗೊಳ್ಳಲಿದೆ. ಬಿಜೆಪಿಯ ಕಿರೋಡಿ ಲಾಲ್ ಮೀಣಾ ಕಳೆದ ಡಿಸೆಂಬರ್‌ನಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Advertisement

Advertisement
Tags :
BJPCongressGOVERNMENTindiaNewsKannadaಪ್ರಧಾನಿ ನರೇಂದ್ರ ಮೋದಿಬೆಂಗಳೂರುಸೋನಿಯಾ ಗಾಂಧಿ
Advertisement
Next Article