ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದ ಸೋನಿಯಾ ಗಾಂಧಿ

ವಿರೋಧಪಕ್ಷಗಳ ಸಂಸದರನ್ನು ಕಲಾಪದಿಂದ ಅಮಾನತು ಮಾಡುವ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಜಾ ಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
04:43 PM Dec 20, 2023 IST | Ashitha S
ನವದೆಹಲಿ: ವಿರೋಧಪಕ್ಷಗಳ ಸಂಸದರನ್ನು ಕಲಾಪದಿಂದ ಅಮಾನತು ಮಾಡುವ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಜಾ ಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
Advertisement

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ  ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ ಭವನದ ಸೆಂಟ್ರಲ್ ಹಾಲ್ನ ಸಂವಿಧಾನ್ ಸದನ್ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದರು. 'ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

Advertisement

ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು' ಎಂದು ಸಂಸದರನ್ನು ಬೆಂಬಲಿಸಿದರು.

Advertisement
Tags :
BJPBreakingNewsCongressGOVERNMENTindiaLatestNewsNewsKannadaSecurity BreachSONIA GANDHIWinter Parliament Sessionಚುನಾವಣೆನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರು
Advertisement
Next Article