ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಮತದಾರರಿಗೆ ಸೋನಿಯಾ ಭಾವುಕ ಪತ್ರ

ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಾವು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಮತದಾರರಿಗೆ ತಿಳಿಸಿದ್ದಾರೆ.
02:52 PM Feb 15, 2024 IST | Ashitha S

ವದೆಹಲಿ: ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಾವು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಮತದಾರರಿಗೆ ತಿಳಿಸಿದ್ದಾರೆ.

Advertisement

2004ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 77 ವರ್ಷದ ಸೋನಿಯಾ, ತಮ್ಮ ಭಾವನಾತ್ಮಕ ಸಂದೇಶದಲ್ಲಿ ತಮ್ಮ ಕುಟುಂಬದ ಸದಸ್ಯರೊಬ್ಬರು ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. 'ನಾನು ಈಗ ಏನಾಗಿದ್ದೇನೋ ಅದೆಲ್ಲವೂ ನಿಮ್ಮಿಂದ ಎಂದು ಹೇಳಲು ಹೆಮ್ಮೆಪಡುತ್ತೇನೆ. ನೀವು ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಈಗ ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ' ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

'ಈ ನಿರ್ಧಾರದ ಬಳಿಕ ನಾನು ನೇರವಾಗಿ ನಿಮ್ಮ ಸೇವೆ ಮಾಡಲು ಅವಕಾಶ ಸಿಗದಿರಬಹುದು. ಆದರೆ, ನನ್ನ ಆತ್ಮ ಮತ್ತು ಹೃದಯ ಯಾವಾಗಲೂ ನಿಮ್ಮ ಜೊತೆ ಇರಲಿದೆ. ಹಿಂದಿನಂತೆಯೇ, ಭವಿಷ್ಯದಲ್ಲೂ ನೀವು, ನನ್ನ ಮತ್ತು ನನ್ನ ಕುಟುಂಬದ ಜೊತೆ ನಿಲ್ಲುತ್ತೀರಿ ಎಂಬುದು ನನಗೆ ತಿಳಿದಿದೆ' ಎಂದು ಹಿಂದಿಯಲ್ಲಿ ಬರೆದಿರುವ ಸಂದೇಶದಲ್ಲಿ ಸೋನಿಯಾ ತಿಳಿಸಿದ್ದಾರೆ. .

Advertisement

ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ಬಳಿಕ ಸೋನಿಯಾ, ರಾಯ್ ಬರೇಲಿ ಮತದಾರರಿಗೆ ಈ ಸಂದೇಶ ನೀಡಿದ್ದಾರೆ.

Advertisement
Tags :
CongressGOVERNMENTindiaLatestNewslokasabha electionNewsKannadaನವದೆಹಲಿಸೋನಿಯಾ
Advertisement
Next Article