ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

2ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಸೌತ್ ಆಫ್ರಿಕಾ

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಕೇಪ್ ಟೌನ್’ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
02:26 PM Jan 03, 2024 IST | Ashitha S

ನ್ಯೂಲ್ಯಾಂಡ್ಸ್: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಕೇಪ್ ಟೌನ್’ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

Advertisement

ಇನ್ನು ಈ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಶಾರ್ದೂಲ್ ಠಾಕೂರ್ ಬದಲಿಗೆ ಯುವ ವೇಗಿ ಮುಕೇಶ್ ಕುಮಾರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದೆ. ಇದೀಗ ಸರಣಿಯನ್ನು ಡ್ರಾ ನಲ್ಲಿ ಅಂತ್ಯಗೊಳಿಸಬೇಕಿದ್ದರೆ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಲೇಬೇಕು.

Advertisement

ಅತ್ತ ಸೌತ್ ಆಫ್ರಿಕಾ ತಂಡವು 2ನೇ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಸರಣಿ 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

 

Advertisement
Tags :
GOVERNMENTindiaLatestNewsNewsKannadaಟೆಸ್ಟ್ ಪಂದ್ಯರವಿಚಂದ್ರನ್ ಅಶ್ವಿನ್ಸೌತ್ ಆಫ್ರಿಕಾ
Advertisement
Next Article