For the best experience, open
https://m.newskannada.com
on your mobile browser.
Advertisement

'ಅಪಘಾತ'ದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಸಭಾಪತಿ ಹೊರಟ್ಟಿ

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದರು.
11:34 AM Nov 02, 2023 IST | Ramya Bolantoor
 ಅಪಘಾತ ದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಸಭಾಪತಿ ಹೊರಟ್ಟಿ

ಚಿತ್ರದುರ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದರು. ಇದೇ ಮಾರ್ಗವಾಗಿ ಸಾಗುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆಯನ್ನು ಮರೆದಿದ್ದಾರೆ.

Advertisement

ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರಿಗೆ ಮತ್ತೊಂದು ಕಾರು ಹಿಂಬದಿಯಾಗಿ ಡಿಕ್ಕಿಯಾಗಿ ಅಪಘಾತವಾಗಿತ್ತು. ಈ ಅಪಘಾತದಲ್ಲಿ ಗಾಯತ್ರಿ, ದಿವ್ಯತ್ವ ಮತ್ತು ಪ್ರಿಯಾಂಕಾ ಎಂಬುವರು ಗಾಯಗೊಂಡಿದ್ದರು.

ಇದೇ ಮಾರ್ಗವಾಗಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದಂತ ಸಭಾಪತಿ ಹೊರಟ್ಟಿಯವರು ಅಪಘಾತವನ್ನು ಕಂಡು ತಮ್ಮ ಕಾರನ್ನು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದಂತ ಅವರು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸೋ ವ್ಯವಸ್ಥೆ ಮಾಡಿದ್ದಾರೆ.

Advertisement

Advertisement
Tags :
Advertisement