For the best experience, open
https://m.newskannada.com
on your mobile browser.
Advertisement

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
10:48 AM May 19, 2024 IST | Chaitra Kulal
ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ   ತುರ್ತು ಭೂ ಸ್ಪರ್ಶ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

Advertisement

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ.

ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

Advertisement

ಮೇ 16ರಂದು ಕೂಡ ಇಂತಹದ್ದೇ ಒಂದು ಘಟನೆ ಪುಣೆಯಲ್ಲಿ ನಡೆದಿತ್ತು,.180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಯನ್ನು ಪ್ರಾರಂಭಿಸಿದೆ. ಇದಕ್ಕೂ ಮುನ್ನ ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಕರೆಯೊಂದು ಬಂದು ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.

ದಿಲ್ಲಿಯಿಂದ ವಡೋದರಾಕ್ಕೆ ಪ್ರಯಾಣ ಬೆಳೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಎಂದು ಬರೆದಿರುವ ಟಿಶ್ಯೂ ಪೇಪರ್‌ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಈ ಟಿಶ್ಯೂ ಪೇಪರ್‌ ಪತ್ತೆಯಾಗಿ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟು ಮಾಡಿತ್ತು.

Advertisement
Tags :
Advertisement