For the best experience, open
https://m.newskannada.com
on your mobile browser.
Advertisement

ಇಂದು ಸನ್ ರೈಸರ್ಸ್ ಹೈದರಾಬಾದ್ Vs ಸಿಎಸ್ ಕೆ ಮುಖಾಮುಖಿ

ಇಂಡಿಯನ್ ಪ್ರೀಮಿಯರ್ ಲೀಗ್ 2024ರ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲಿಗೆ ಸಿದ್ಧವಾಗಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ಉಭಯ ತಂಡಗಳು ಇಂದು ಸಂಜೆ  7:30ಕ್ಕೆ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ.
12:23 PM Apr 05, 2024 IST | Ashitha S
ಇಂದು ಸನ್ ರೈಸರ್ಸ್ ಹೈದರಾಬಾದ್ vs ಸಿಎಸ್ ಕೆ ಮುಖಾಮುಖಿ

ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲಿಗೆ ಸಿದ್ಧವಾಗಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ಉಭಯ ತಂಡಗಳು ಇಂದು ಸಂಜೆ  7:30ಕ್ಕೆ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ.

Advertisement

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಸಿಎಸ್​ಕೆ 14ರಲ್ಲಿ ಜಯಿಸಿದೆ. ಹೈದರಾಬಾದ್ 2ರಲ್ಲಿ ಮಾತ್ರ ಗೆದ್ದಿದೆ.

ಪಂದ್ಯ ಸ್ಟಾರ್ ಸ್ಪೋರ್ಟ್ಸ್, ಜಿಯೋಸಿನಿಮಾ ವೆಬ್‌ಸೈಟ್ ಮತ್ತು ಅಪ್ಲಿಕೇಶನ್ ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

Advertisement

ಸನ್‌ರೈಸರ್ಸ್ ಹೈದರಾಬಾದ್ ತಂಡ:
ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್ .

ಚೆನ್ನೈ ಸೂಪರ್ ಕಿಂಗ್ಸ್ ತಂಡ:
ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮತೀಶ ಪತಿರಾಣ, ಮುಸ್ತಾಫಿಜುರ್ ರೆಹಮಾನ್/ಮಹೀಶಾ ತೀಕ್ಷಾಣ.

Advertisement
Tags :
Advertisement