For the best experience, open
https://m.newskannada.com
on your mobile browser.
Advertisement

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ ಮಳೆ ಸುರಿಯಲಾರಂಭಿಸಿದ್ದರಿಂದ ಟಾಸ್‌ ನಡೆಸಲು ಸಾಧ್ಯವಾಗಲಿಲ್ಲ. ಹೀಗಿರುವಾಗ ಮೈದಾನದ ಸಿಬ್ಬಂದಿಯೊಂದಿಗೆ ಮಾತನಾಡಿದ ಅಂಪೈರ್‌ಗಳು ಪಂದ್ಯ ರದ್ದುಗೊಳಿಸಲು ನಿರ್ಧರಿಸಿದರು.
06:50 AM May 17, 2024 IST | Ashitha S
ಮಳೆಯಿಂದಾಗಿ ಪಂದ್ಯ ರದ್ದು  ಪ್ಲೇಆಫ್​ಗೇರಿದ್ದು ಯಾರು

ಹೈದರಾಬಾದ್‌: ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ ಮಳೆ ಸುರಿಯಲಾರಂಭಿಸಿದ್ದರಿಂದ ಟಾಸ್‌ ನಡೆಸಲು ಸಾಧ್ಯವಾಗಲಿಲ್ಲ. ಹೀಗಿರುವಾಗ ಮೈದಾನದ ಸಿಬ್ಬಂದಿಯೊಂದಿಗೆ ಮಾತನಾಡಿದ ಅಂಪೈರ್‌ಗಳು ಪಂದ್ಯ ರದ್ದುಗೊಳಿಸಲು ನಿರ್ಧರಿಸಿದರು.

Advertisement

ಇನ್ನು ಮಳೆಯಿಂದಾಗಿ ಪಂದ್ಯ ರದ್ದಾದರೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಪ್ಲೇ ಆಫ್​ಗೇರುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯ ರದ್ದಾದ ಕಾರಣ ಹೈದರಾಬಾದ್ ಮತ್ತು ಗುಜರಾತ್ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಹೈದರಾಬಾದ್ ಈಗ 13 ಪಂದ್ಯಗಳಿಂದ 15 ಅಂಕಗಳನ್ನು ಹೊಂದಿದ್ದು, ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ.

ಚೆನ್ನೈ ಸೂಪರ್ ಕಿಂಗ್ಸ್ ಹೊರತುಪಡಿಸಿ, ಯಾವುದೇ ತಂಡವು 15 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ಸನ್‌ರೈಸರ್ಸ್ ಪ್ಲೇ ಆಫ್‌ಗೆ ಅರ್ಹತೆ ಪಡೆಯಿತು. ಚೆನ್ನೈ 13 ಪಂದ್ಯಗಳ ನಂತರ 14 ಅಂಕಗಳನ್ನು ಹೊಂದಿದೆ. ಈ ತಂಡ ಮೇ 18ರಂದು ಆರ್​ಸಿಯನ್ನು ಎದುರಿಸಬೇಕಿದೆ.

Advertisement

Advertisement
Tags :
Advertisement