ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶ್ರೀಮುರಳಿ ಹುಟ್ಟುಹಬ್ಬ: ಅಬ್ಬರಿಸಿ ಎಂಟ್ರಿ ಕೊಟ್ಟ ‘ಬಘೀರ’

‘ರೋರಿಂಗ್​ ಸ್ಟಾರ್​’ ಶ್ರೀಮುರಳಿ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ‘ಬಘೀರ’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಜನ್ಮದಿನದ ಸಲುವಾಗಿ ರಿಲೀಸ್​ ಆದ ಟೀಸರ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.
11:13 AM Dec 17, 2023 IST | Ashitha S

‘ರೋರಿಂಗ್​ ಸ್ಟಾರ್​’ ಶ್ರೀಮುರಳಿ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ‘ಬಘೀರ’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಜನ್ಮದಿನದ ಸಲುವಾಗಿ ರಿಲೀಸ್​ ಆದ ಟೀಸರ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

Advertisement

ಚಿತ್ರ ಮೇಲಿನ ನಿರೀಕ್ಷೆ ಹೆಚ್ಚಿಸುವ ರೀತಿಯಲ್ಲಿ ಟೀಸರ್​ ಮೂಡಿಬಂದಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಪ್ರಶಾಂತ್​ ನೀಲ್​ ಅವರು ‘ಬಘೀರ’ ಸಿನಿಮಾಗೆ ಕಥೆ ಬರೆದಿದ್ದಾರೆ. ಡಾ. ಸೂರಿ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’, ‘ಸಲಾರ್​’ ರೀತಿಯೇ ಈ ಸಿನಿಮಾ ಕೂಡ ಡಾರ್ಕ್​ ಶೇಡ್​ನಲ್ಲಿ ಮೂಡಿಬರುತ್ತಿದೆ ಎಂಬುದಕ್ಕೆ ಟೀಸರ್​ ಸಾಕ್ಷಿ ಒದಗಿಸುತ್ತಿದೆ. ಅಲ್ಲದೇ ಇದು ಭರ್ಜರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ ಎಂಬುದು ಸ್ಪಷ್ಟವಾಗಿದೆ. ಬಿ. ಅಜನೀಶ್​ ಲೋಕನಾಥ್​ ಅವರು ‘ಬಘೀರ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

Advertisement

 

Advertisement
Tags :
BagheeraBagheera Teaserhombale filmsindiaLatestNewsNewsKannadaPrashanth NeelSRI MURALIVijay Kiragandurನವದೆಹಲಿಬೆಂಗಳೂರುಶ್ರೀಮುರಳಿ
Advertisement
Next Article