For the best experience, open
https://m.newskannada.com
on your mobile browser.
Advertisement

‘ಬಘೀರ’ ಶೂಟಿಂಗ್ ವೇಳೆ ಕಾಲಿಗೆ ಗಾಯ ಮಾಡಿಕೊಂಡ ಶ್ರೀಮುರಳಿ

ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಶೂಟಿಂಗ್ ವೇಳೆ ಕಾಲಿಗೆ ಮತ್ತೆ ಗಾಯ ಆಗಿದ್ದು, ಇದರಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
07:32 AM Apr 22, 2024 IST | Ashika S
‘ಬಘೀರ’ ಶೂಟಿಂಗ್ ವೇಳೆ ಕಾಲಿಗೆ ಗಾಯ ಮಾಡಿಕೊಂಡ ಶ್ರೀಮುರಳಿ

ಬೆಂಗಳೂರು: ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಶೂಟಿಂಗ್ ವೇಳೆ ಕಾಲಿಗೆ ಮತ್ತೆ ಗಾಯ ಆಗಿದ್ದು, ಇದರಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

‘ಬಘೀರ’ ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಗೊತ್ತಾಗಿದೆ. ಡ್ಯೂಪ್ ಬಳಸದೆ ಸ್ವತಃ ಶ್ರೀಮುರಳಿ ಅವರೇ ಸ್ಟಂಟ್​ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಈ ಚಿತ್ರದ ಶೂಟಿಂಗ್​ನ ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

‘ಬಘೀರ’ ಸಿನಿಮಾಗೆ ಖ್ಯಾತ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಬಂಡವಾಳ ಹೂಡುತ್ತಿದೆ. ಸೂರಿ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ರಂಗಾಯಣ ರಘು ಮೊದಲಾದವರು ನಟಿಸುತ್ತಿದ್ದಾರೆ. ಈ ಸಿನಿಮಾಗೆ ಪ್ರಶಾಂತ್ ನೀಲ್ ಹಾಗೂ ಸೂರಿ ಕಥೆ ಬರೆದಿದ್ದಾರೆ.

Advertisement

‘ಬಘೀರ’ ಚಿತ್ರಿಕರಣದ ಸಮಯದಲ್ಲಿ ಚಿತ್ರದಲ್ಲಿನ ಮುಖ್ಯವಾಗಿ ನಡೆಯುವ ಸನ್ನಿವೇಶದ ಬಹು ದೊಡ್ಡ ಸ್ಟಂಟ್ ಸೀನ್ ವೇಳೆ ಶ್ರೀಮುರಳಿ ಅವರಿಗೆ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Tags :
Advertisement