ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮಮಂದಿರ ರಾಜಕೀಯದ ನಡುವೆ ಸಂವಿಧಾನವನ್ನು ನೆನಪಿಸಿಕೊಳ್ಳುವ ಅಗತ್ಯತೆಯಿದೆ: ಶೃತಿ ಹರಿಹರನ್

ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದು ನಟಿ ಶೃತಿ ಹರಿಹರನ್ ಹೇಳಿದ್ದಾರೆ.
08:42 PM Jan 24, 2024 IST | Maithri S

ಬೆಂಗಳೂರು: ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದು ನಟಿ ಶೃತಿ ಹರಿಹರನ್ ಹೇಳಿದ್ದಾರೆ.

Advertisement

ಧರ್ಮದ ವಿಷಯದಲ್ಲಿ ರಾಜಕೀಯ ನಡೆಯುತ್ತಿರುವ ಈ ಸಂದರ್ಭದಲ್ಲಿ ದೇಶದ ಸಂವಿಧಾನವನ್ನು ನೆನಪಿಸಿಕೊಳ್ಳುವುದು ಮುಖ್ಯ ಎನ್ನುತ್ತ ಭಾರತದ ಸಂವಿಧಾನದ ಪೀಠಿಕೆಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ʼಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಜೊತೆಗೆ ಯಾವುದೇ ಧರ್ಮವನ್ನು ಪೋಷಿಸುವುದು ಅಥವ ದ್ವೇಷಿಸುವುದು ಸರಿಯಲ್ಲ ಎಂದು ಸಂವಿಧಾನವೇ ಹೇಳಿದೆ. ಆದರೆ ಇಂದು ಧರ್ಮವನ್ನು ರಾಜಕೀಯಗೊಳಿಸುತ್ತಿರುವುದನ್ನು ನೋಡಿಕೊಂಡು ಕೂರಲಾಗದುʼ ಎಂದು ಬರೆದುಕೊಂಡಿದ್ದಾರೆ.

Advertisement

ಎರಡನೆಯದಾಗಿ, ಜೈ ಶ್ರೀ ರಾಮ್ ಎನ್ನುವುದರಲ್ಲಿ ಯಾವುದೇ ತಪ್ಪಿಲ್ಲ. ನಮ್ಮೊಳಗಿನ ರಾಮನನ್ನು ನಾವು ಹುಡುಕಿಕೊಳ್ಳಬೇಕು ಎಂಬುದನ್ನು ಸೂಚಿಸಲು ಹನುಮಂತ ತನ್ನ ಎದೆ ಸೀಳಿದನೆಂದು ರಾಮಾಯಣದಲ್ಲಿ ಬರೆಯಲಾಗಿರಬಹುದು ಎಂದರು.

 

Advertisement
Tags :
INSTAGRAM POSTLatestNewsNewsKannadaSruti hariharanಬೆಂಗಳೂರು
Advertisement
Next Article