ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
10:47 PM May 17, 2024 IST | Ashika S

ಬೆಂಗಳೂರು: ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ.

ಈ ಹಿನ್ನಲೆ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 ನ್ನು ಕೂಡ ಮುಂದೂಡಲಾಗಿದ್ದು, ಅದನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

Advertisement

ಎಸ್ಎಸ್ಎಲ್‌ಸಿ ಪರೀಕ್ಷೆ-2 ರ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

Advertisement
Tags :
bengaluruLatetsNewsNewsKarnatakasslc exam
Advertisement
Next Article