ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು.
11:28 AM May 09, 2024 IST | Ashitha S

ಮಂಗಳೂರು:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು.

Advertisement

ಇನ್ನು ಮಂಗಳೂರಿನ ಚಿನ್ಮಯ್ (624) ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಧರ್ಮಸ್ಥಳ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್ ಬೆಳ್ತಂಗಡಿ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಕುತ್ಯಾರ್ ನಿವಾಸಿಯಾಗಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ಅವರು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement

ಈ ಬಾರಿ ಮೇದಾ ಪಿ ಶೆಟ್ಟಿ ( ಬೆಂಗಳೂರು) 624/625, ಹರ್ಷಿತಾ ಡಿಎಂ (ಮಧುಗಿರಿ), ಚಿನ್ಮಯ್ (ದಕ್ಷಿಣ ಕನ್ನಡ), ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ (ಶಿರಸಿ), ಚಿನ್ಮಯ್ (ಶಿರಸಿ) ಹಾಗು  ಶ್ರೀರಾಮ್ (ಶಿರಸಿ) ಈ  7 ವಿದ್ಯಾರ್ಥಿಗಳು ದ್ವೀತಿಯ ಸ್ಥಾನ ಹಂಚಿಕೊಂಡಿದ್ದಾರೆ,

ಇನ್ನು ಕಳೆದ ವರ್ಷಕ್ಕಿಂತ ಈ ವರ್ಷ SSLC ಫಲಿತಾಂಶ ಶೇಕಡಾ 10ರಷ್ಟು ಕುಸಿತ ಕಂಡಿದ್ದು,  ಬಾಲಕರು: 2,87,416 (65.90%), ಬಾಲಕಿಯರು: 3,43,788 (81.11%) ಋಷ್ಟು ಇದೆ.  1)ಉಡುಪಿ ಪ್ರಥಮ ಸ್ಥಾನ(94%) ಪಡೆದುಕೊಂಡರೆ,  ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)  ಹಾಗು ಶಿವಮೊಗ್ಗ (88.67%) ಪಡೆದುಕೊಂಡಿದೆ.

 

Advertisement
Tags :
GOVERNMENTindiaKARNATAKANewsKarnatakaSSLCಮಂಗಳೂರು
Advertisement
Next Article