For the best experience, open
https://m.newskannada.com
on your mobile browser.
Advertisement

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.
12:30 PM May 09, 2024 IST | Nisarga K
ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ   ಪೋಷಕರ ಹುಡುಕಾಟ
ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಬೆಂಗಳೂರು: ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

Advertisement

ಸುರೇಶ್​ ಮತ್ತು ರೂಪ ದಂಪತಿಗಳ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
Advertisement