ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
07:46 AM May 09, 2024 IST | Nisarga K
ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

Advertisement

ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.

Advertisement

ಫಲಿತಾಂಶ ಎಲ್ಲಿ ನೋಡಬಹುದು?
ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Advertisement
Tags :
bengaluruBOARD EXAMkarnatkaLatestNewsNewsKarnatakaresultSSLCTODAY
Advertisement
Next Article